Crime News

ಬೈಕ್ ಕಳವು

            ದಿನಾಂಕ: 14-01-2020 ರಂದು ಕೂಡಿಗೆ ಸೈನಿಕ ಶಾಲೆಯಲ್ಲಿ ಶಿಕ್ಷಕರಾಗಿರುವ ಶಿವಕುಮಾರ್ ಎಂಬುವವರು ಕುಶಾಲನಗರ ಪಟ್ಟಣದ ಕೆ.ಎಸ್.ಆರ್.ಟಿ ಸಿ ಬಸ್ ನಿಲ್ದಾಣದ ದ್ವಿಚಕ್ರ ವಾಹನ ನಿಲುಗಡೆ ಸ್ಥಳದಲ್ಲಿ ತಮ್ಮ ಕೆಎ-11-ವಿ-2136 ರ ಬೈಕನ್ನು ನಿಲ್ಲಿಸಿ ಅವರ ಸ್ವಗ್ರಾಮ ಮಂಡ್ಯಕ್ಕೆ ಬಸ್ಸಿನಲ್ಲಿ ಹೋಗಿದ್ದರು. ದಿನಾಂಕ: 16-01-2020 ರಂದು ವಾಪಾಸ್ಸು ಕುಶಾಲನಗರಕ್ಕೆ ಬಂದು ವಾಹನ ನಿಲುಗಡೆ ಸ್ಥಳದಲ್ಲಿ  ನೋಡಿದಾಗ ಯಾರೋ ಕಳ್ಳರು ಬೈಕನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಶಿವಕುಮಾರ್ ರವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ

            ದಿನಾಂಕ: 17-01-2020 ರಂದು ಕುಶಾಲನಗರ ಪಟ್ಟಣದ ಬೈಚನಹಳ್ಳಿ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎಲ್-18-ಜಿ-4005 ರ ಖಾಸಗಿ ಬಸ್ಸನ್ನು ಅದರ ಚಾಲಕ ರಮೇಶ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಬಸ್ ಮುಂದೆ ಹೋಗುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿಪಡಿಸಿದ ಪರಿಣಾಮ ಆಟೋ ಚಾಲಕ ಹಾಗೂ ಪ್ರಯಾಣಿಕರು ಗಾಯಗೊಂಡಿದ್ದು ಈ ಬಗ್ಗೆ ಆಟೋ ಚಾಲಕ ಲತೀಪುದ್ದೀನ್ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವ್ಯಕ್ತಿ ಆತ್ಮಹತ್ಯೆ

            ದಿನಾಂಕ: 17-01-2020 ರಂದು ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಗ್ರಾಮದ ನಿವಾಸಿ ಮೋಹನ್ ಎಂಬುವವರು ವೈಯಕ್ತಿಕ ವಿಚಾರದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಅವರ ವಾಸದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತರ ತಂದೆ ನೀಡಿದ ದೂರಿನ ಮೇರೆ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಎಟಿಎಂ ಕಾರ್ಡ್ ಮಾಹಿತಿ ಪಡೆದು ವಂಚನೆ

            ಬ್ಯಾಂಕ್ ಮೇನೇಜರ್ ಎಂಬುದಾಗಿ ಮೊಬೈಲ್ ಕರೆಮಾಡಿದ ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್ ನಂಬರ್ ಮತ್ತು ಒಟಿಪಿ ಸಂಖ್ಯೆಯನ್ನು ನೀಡಿ ಹಣ ಕಳೆದುಕೊಂಡು ವ್ಯಕ್ತಿಯೊಬ್ಬರು ವಂಚನೆಗೆ ಒಳಗಾಗಿದ್ದಾರೆ. ದಿನಾಂಕ: 14-01-2020 ರಂದು ವಿರಾಜಪೇಟೆ ತಾಲ್ಲೂಕು ಬೇಟೋಳಿ ಗ್ರಾಮದ ನಿವಾಸಿ ನಾರಾಯಣ ಎಂಬುವವರು ವಿರಾಜಪೇಟೆ ಡಿಸಿಸಿ ಬ್ಯಾಂಕ್ ನಲ್ಲಿ ಉಳಿತಾಯ ಖಾತೆ ಹೊಂದಿರುತ್ತಾರೆ. ಅವರ ಮೊಬೈಲ್ ಗೆ 7866822967 ರ ಮೊಬೈಲ್ ಸಂಖ್ಯೆಯಿಂದ ಅಪರಿಚಿತ ವ್ಯಕ್ತಿಯೊಬ್ಬ ಕರೆಮಾಡಿ ಡಿಸಿಸಿ ಬ್ಯಾಂಕ್ ಮೇನೇಜರ್ ಎಂಬುದಾಗಿ ಹೇಳಿ ನಂಬಿಸಿ ಎಟಿಎಂ ಕಾರ್ಡ್ ಬ್ಲಾಕ್ ಆಗುತ್ತಿದ್ದು ರಿನೀವಲ್ ಮಾಡುವುದಾಗಿ ಹೇಳಿ ನಂಬಿಸಿ ಎಟಿಎಂ ಕಾರ್ಡ್ ನಂಬರ್ ಪಡೆದುಕೊಂಡು ನಂತರ ಒಟಿಪಿ ನಂಬರ್ ಪಡೆದುಕೊಂಡು ಬ್ಯಾಂಕ್ ಖಾತೆಯಿಂದ 20,000 ರೂ ಹಣವನ್ನು ತೆಗೆದು ವಂಚನೆ ಮಾಡಿದ್ದು ಈ ಬಗ್ಗೆ  ನಾರಾಯಣ ರವರು ದಿನಾಂಕ: 17-01-2020 ರಂದು ನೀಡಿದ ಪುಕಾರಿನ ಮೇರೆ ಕೊಡಗು ಸೈಬರ್ ಅಪರಾಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಪರಿಚಿತ ವ್ಯಕ್ತಿ ಅಸ್ವಾಭವಿಕ ಸಾವು

            ದಿನಾಂಕ: 16-01-2020 ರಂದು ವಿರಾಜಪೇಟೆ ತಾಲ್ಲೂಕು ಪೊನ್ನಂಪೇಟೆ ಗ್ರಾಮದ ಅಂಚೆ ಕಛೇರಿಗೆ ಹೋಗುವ ರಸ್ತೆ ಬದಿಯಲ್ಲಿ ಅಂದಾಜು 40-45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ದಿ: 17-01-2020 ರಂದು ಮೃತಪಟ್ಟಿದ್ದು ಈ ಬಗ್ಗೆ ಪೊನ್ನಂಪೇಟೆ ಪಂಚಾಯಿತಿ ಪಿಡಿಒ ಪುಟ್ಟರಾಜು ಎಂಬುವವರು ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ

            ದಿನಾಂಕ: 17-01-2020 ರಂದು ಮಡಿಕೇರಿ ನಗರದ ವಿಜಯ ವಿನಾಯಕ್ ದೇವಾಲಯದ ಜಂಕ್ಷನ್ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಎಂ-ಎ-3575 ರ ಸ್ವಿಫ್ಟ್ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುಗಡೆಯಿಂದ ಬರುತ್ತಿದ್ದ ಆಟೋರಿಕ್ಷಾಕ್ಕೆ ಡಿಕ್ಕಿಪಡಿಸಿದ ಪರಿಣಾಮ ಆಟೋ ಚಾಲಕ ಇರ್ಫಾನ್ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ಮಡಿಕೇರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕೊಲೆ ಪ್ರಕರಣ

            ಮದ್ಯಪಾನಕ್ಕೆ ಹಣ ಕೊಡದ ಕಾರಣಕ್ಕೆ ಮಗನೊಬ್ಬ ತಂದೆ ತಾಯಿಗೆ ಹಲ್ಲೆ ಮಾಡಿದ ಪರಿಣಾಮ ತಂದೆ ಮೃತಪಟ್ಟು ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ದಿನಾಂಕ: 17-01-2020 ರಂದು ಸೋಮವಾರಪೇಟೆ ತಾಲ್ಲೂಕು ಗೋಣಿಮರೂರು ಗ್ರಾಮದ ಹಾಡಿ ನಿವಾಸಿ ಕರಿಯಪ್ಪ ಮತ್ತು ಅವರ ಪತ್ನಿ ಲೀಲಾ ಎಂಬುವವರು ಮನೆಯಲ್ಲಿರುವಾಗ ಅವರ ಮಗ ಲೋಕೇಶ್ ಎಂಬುವವರು ಮದ್ಯಪಾನಕ್ಕ ಹಣ ಕೇಳಿದಾಗ ತಂದೆ-ತಾಯಿ ಹಣ ಕೊಡದೇ ಇದ್ದುದರಿಂದ ಜಗಳ ಮಾಡಿ ಹಲ್ಲೆ ಮಾಡಿದ ಪರಿಣಾಮ ಕರಿಯಪ್ಪ ರವರು ಮೃತಪಟ್ಟು ಲೀಲಾವತಿ ರವರು ಗಂಭೀರವಾಗಿ ಗಾಯಗೊಂಡಿದ್ದು ಈ ಬಗ್ಗೆ ಸತೀಶ್ ಎಂಬುವವರು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.