Crime News

ಬೈಕ್ ಡಿಕ್ಕಿ, ಪಾದಚಾರಿ ಸಾವು

            ದಿನಾಂಕ: 19-01-2020 ರಂದು ವಿರಾಜಪೇಟೆ ಪಟ್ಟಣದ ರಾಮಮೂರ್ತಿ ರಸ್ತೆಯಲ್ಲಿ ಕೆಎ-12-ಎಸ್-2739 ರ ಬೈಕನ್ನು ಅದರ ಸವಾರ ರಾಫಿಕ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ರಸ್ತೆ ದಾಟುತ್ತಿದ್ದ ಖಾಲಿದ್ ಅಹಮದ್ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ಸವಾರ ಹಾಗೂ ಪಾದಚಾರಿ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಖಾಲಿದ್ ಅಹಮದ್ ರವರು ಮೃತಪಟ್ಟಿದ್ದು ಈ ಬಗ್ಗೆ ಮುನಾವರ ಹುಸೇನ್ ಎಂಬುವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ವ್ಯಕ್ತಿ ಆತ್ಮಹತ್ಯೆ

            ದಿನಾಂಕ: 20-01-2020 ರಂದು ವಿರಾಜಪೇಟೆ ತಾಲ್ಲೂಕು ಮುಗುಟಗೇರಿ ಗ್ರಾಮದ ನಿವಾಸಿ ಖಾದರ್ ಎಂಬುವವರು ವೈಯಕ್ತಿಕ ವಿಚಾರದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನ ಮೇರೆ ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 17-01-2020 ರಂದು ವಿರಾಜಪೇಟೆ ತಾಲ್ಲೂಕು ಬಿಟ್ಟಂಗಾಲ ಗ್ರಾಮದ ಬಳಿ  ಮುಖ್ಯ ರಸ್ತೆಯಲ್ಲಿ ಕೆಎ-19-ಬಿ 7080 ರ ಪಿಕ್ ಅಪ್ ಜೀಪನ್ನು ಅದರ ಚಾಲಕ ರಾಜು ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಜೀಪಿನ ಮುಂದೆ ಹೋಗುತ್ತಿದ್ದ ಬೈಕ್ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ಸವಾರ ಹರೀಶ್ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ನಕಲಿ ಸಹಿ ಬಳಸಿ ಅಕ್ರಮ ಖಾತೆ ವರ್ಗಾವಣೆ

            ವಿರಾಜಪೇಟೆ ತಾಲ್ಲೂಕು ನಾಲ್ಕೇರಿ ಗ್ರಾಮದ ನಿವಾಸಿ ಕಳ್ಳೇಂಗಡ ಗಣಪತಿ ಎಂಬುವವರಿಗೆ ಸೇರಿದ 1.12 ಎಕರೆ ಜಾಗವನ್ನು ಕಳ್ಳೇಂಗಡ ಪೂಣಚ್ಚ, ಕಳ್ಳೇಂಗಡ ಶ್ರೀಮತಿ ಮಲ್ಲಿಗೆ, ಕರ್ತೂರ ಪ್ರಕಾಶ ಎಂಬುವವರು ಸೇರಿಕೊಂಡು ಗಣಪತಿ ರವರ ನಕಲಿ ಸಹಿಯನ್ನು ಮಾಡಿ ನಕಲಿ ವಿಭಾಗ ಪತ್ರ ಮಾಡಿ ಭೂ ಕಬಳಿಸಲು ಯತ್ನಿಸಿರುವುದಾಗಿ ದಿನಾಂಕ; 20-01-2020 ರಂದು ನೀಡಿದ ಪುಕಾರಿನ ಮೇರೆ ಕುಟ್ಟ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ: 18-01-2020 ರಂದು ಸೋಮವಾರಪೇಟೆ ತಾಲ್ಲೂಕು ಕೊಡ್ಲಿಪೇಟೆ ಗ್ರಾಮದ ನಿವಾಸಿ ಗಿರೀಶ್ ಎಂಬುವವರು  ಅವರ ವಾಸದ ಮನೆಗೆ ಬೀಗ ಹಾಕಿಕೊಂಡು ಮಗಳ ಮದುವೆಗಾಗಿ ಬಟ್ಟೆ ಖರೀದಿಸುವ ಸಲುವಾಗಿ ತಮಿಳುನಾಡಿದ ಕಂಚಿಪುರಂ ಗೆ ಹೋಗಿದ್ದ ಸಮಯದಲ್ಲಿ ಯಾರೋ ಕಳ್ಳರು ಮನೆಯ ಬಾಗಿಲು ಮುರಿದು ಒಳಗೆ ನುಗ್ಗಿ ಬೀರುವಿನಲ್ಲಿಟ್ಟಿದ್ದ ರೂ, 47,000 ಮೌಲ್ಯದ ಬೆಳ್ಳಿಯ ಪಾತ್ರೆಗಳು ಹಾಗೂ ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಗಿರೀಶ್ ರವರು ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 20-01-2020 ರಂದು ಸೋಮವಾರಪೇಟೆ ತಾಲ್ಲೂಕು 7ನೇ ಹೊಸಕೋಟೆ ಗ್ರಾಮದ ತೊಂಡುರು ರಸ್ತೆಯಲ್ಲಿ ಕೆಎ-04-ಎಂಇ-2636 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನ ಮಾಡಿಕೊಂಡು ಹೋಗಿ ಆಟೋ ರಿಕ್ಷಾಕ್ಕೆ ಡಿಕ್ಕಿಪಡಿಸಿದ ಪರಿಣಾಮ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಎಂ.ಸುಂದರ, ವಿಶ್ವನಾಥ ಹಾಗೂ ಪಿ.ಸುಂದರ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.