Crime News

ಅಕ್ರಮ ಮರಳು ಸಾಗಾಟ ಪ್ರಕರಣ

          ದಿನಾಂಕ: 29-01-2019 ರಂದು ಸೋಮವಾರಪೇಟೆ ತಾಲ್ಲೂಕು ಹಟ್ಟಿಹೊಳೆ ಗ್ರಾಮದ ಬಳಿ ಪಿಕ್ಅಪ್ ಜೀಪಿನಲ್ಲಿ ಅಕ್ರಮವಾಗಿ ಮರಳ ಸಾಗಾಟ ಮಾಡುತ್ತಿದ್ದ ಪ್ರಕರಣ ವನ್ನು ಸೋಮವಾರಪೇಟೆ ಠಾಣೆ ಪಿ.ಎಸ್.ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಕೆಎ-12-ಬಿ-2823 ರ ಪಿಕ್ ಅಪ್ ಮತ್ತು ಮರಳನ್ನು ವಶಕ್ಕೆ ಪಡೆದುಕೊಂಡು ಪಿಕ್ ಅಪ್ ಚಾಲಕ ಮತ್ತು ಮಾಲೀಕರ ವಿರುದ್ದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮರಳು ಸಾಗಾಟ ಪ್ರಕರಣ

          ದಿನಾಂಕ: 29-01-2019 ರಂದು ವಿರಾಜಪೇಟೆ ತಾಲ್ಲೂಕು ಅತ್ತೂರು ಗ್ರಾಮದ ಬಳಿ ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣ ವನ್ನು ಗೋಣಿಕೊಪ್ಪ ಠಾಣೆ ಪಿ.ಎಸ್.ಐ ಸುರೇಶ್ ಬೋಪಣ್ಣ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಕೆಎ-12-ಎ-4216 ರ ಟಿಪ್ಪರ್ ಲಾರಿ ಮತ್ತು ಮರಳನ್ನು ವಶಕ್ಕೆ ಪಡೆದುಕೊಂಡು ಲಾರಿ ಚಾಲಕ ಕಾರ್ತಿಕ್ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 29-01-2020 ರಂದು ವಿರಾಜಪೇಟೆ ತಾಲ್ಲೂಕು ಕೈಕೇರಿ ಗ್ರಾಮದ ಬಳಿ ಮುಖ್ಯ ವಿರಾಜಪೇಟೆ –ಗೋಣಿಕೊಪ್ಪ ರಸ್ತೆಯಲ್ಲಿ ಮನೋಜ್ ಎಂಬುವವರು ಸ್ಕೂಟರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿದ್ದ ಬ್ಯಾರಿಕೇಡ್ ಗೆ ಡಿಕ್ಕಿಪಡಿಸಿದ ಪರಿಣಾಮ ಕೆಳಗೆ ಬಿದ್ದು ಬೈಕ್ ಸವಾರ ಹಾಗೂ ಹಿಂಬದಿ ಸವಾರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿದ್ದರು. ವೈದ್ಯರು ಪರೀಕ್ಷಿಸಿ ಬೈಕ್ ಸವಾರ ಮೃತಪಟ್ಟಿರುವುದಾಗಿ ತಿಳಿಸಿದ್ದು ಈ ಬಗ್ಗೆ ಸತೀಶ್ ಎಂಬುವವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಾಗಿರುತ್ತದೆ.