Crime News

ಹಲ್ಲೆ ಪ್ರಕರಣ

          ದಿನಾಂಕ: 30-01-2020 ರಂದು ಸೋಮವಾರಪೇಟೆ ತಾಲ್ಲೂಕು ಕೂಡಿಗೆ ಕೊಪ್ಪಲು ಗ್ರಾಮದ ನಿವಾಸಿ ಕಿರಣ ಮತ್ತು ಸತೀಶ ಎಂಬುವವರು ದಾರಿಯ ವಿಚಾರದಲ್ಲಿ ಪರಸ್ಪರ ಜಗಳ ಮಾಡಿ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿಕೊಂಡಿದ್ದು ಈ ಬಗ್ಗೆ ಉಭಯಕಡೆಯವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಫಘಾತ ಪ್ರಕರಣ

          ದಿನಾಂಕ: 30-01-2020 ರಂದು ವಿರಾಜಪೇಟೆ ತಾಲ್ಲೂಕು ಮಾಕುಟ್ಟ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-02-ಡಿ-7039 ರ ಲಾರಿಯನ್ನು ಅದರ ಚಾಲಕ ಸೈಯದ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ್ದರಿಂದ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪ್ರಪಾತಕ್ಕೆ ಮಗುಚಿ ಬಿದ್ದ ಪರಿಣಾಮ ಚಾಲಕ ಹಾಗೂ ವಿಕಾಸ್ ಯಾದವ್ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.