Crime News

ಅಕ್ರಮ ಗಾಂಜಾ ಮಾರಾಟ, ಆರೋಪಿ ಬಂಧನ

          ದಿನಾಂಕ: 31-01-2020 ರಂದು ವಿರಾಜಪೇಟೆ ತಾಲ್ಲೂಕು ತಿತಿಮತಿ ಗ್ರಾಮದ ದೇವಮಚ್ಚಿ ನಿವಾಸಿ ಸತೀಶ ಎಂಬುವವರು ಅಕ್ರಮ ವಾಗಿ ಗಾಂಜಾ ಮಾರಾಟ ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿ ಮೇರೆ ಗೋಣಿಕೊಪ್ಪ ಠಾಣೆ ಪಿಎಸ್ಐ ಸುರೇಶ್ ಬೋಪಣ್ಣ ಮತ್ತು ಸಿಬ್ಬಂದಿಯವರು ದಾಳಿ ಮಾಡಿ ಸತೀಶ್ ಎಂಬುವವರು ಅವರ ವಾಸನ ಮನೆಯ ಪಕ್ಕದ ಶೆಡ್ ನಲ್ಲಿ ನಿಲ್ಲಿಸಿದ್ದ ಕೆಎಲ್-55-ಹೆಚ್-2322 ರ ಕಾರಿನಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ಅಕ್ರಮವಾಗಿ ಇಟ್ಟುಕೊಂಡಿದ್ದ ಗಾಂಜಾ ಹಾಗೂ ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

          ದಿನಾಂಕ: 31-01-2020 ರಂದು ಸೋಮವಾರಪೇಟೆ ತಾಲ್ಲೂಕು ಕಲ್ಕಂದೂರು ಗ್ರಾಮದ ನಿವಾಸಿ ವಿಜಯ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ಗಾಂಧಿ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ನೋವುಪಡಿಸಿದ್ದು ಈ ಬಗ್ಗೆ ವಿಜಯ ರವರು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.