Crime News

ಕಳವು ಪ್ರಕರಣ

          ದಿನಾಂಕ: 01-02-2020 ರಂದು ವಿರಾಜಪೇಟೆ ತಾಲ್ಲೂಕು ಕಡಂಗ ಗ್ರಾಮದ ಕೊಕ್ಕಂಡಬಾಣೆ ದರ್ಗಾದ ಬಾಗಿಲಿಗ ಬೀಗವನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಹುಂಡಿಯ ಬೀಗವನ್ನು ಒಡೆದು ಅದರಲ್ಲಿದ್ದ ಅಂದಾಜು 20,000 ರೂ ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಇಬ್ರಾಹಿಂ ಎಂಬುವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

          ದಿನಾಂಕ: 02-02-2020 ರಂದು ವಿರಾಜಪೇಟೆ ತಾಲ್ಲೂಕು ಅತ್ತೂರು ಗ್ರಾಮದ ಒಂಟಿಅಂಗಡಿ ಎಸ್ಟೇಟ್ ಲೈನ್ ನಿವಾಸಿ ರಾಜು, ಅವರ ಪತ್ನಿ ಹಾಗೂ ಮಗ ದಾಸ ಎಂಬುವವರಿಗೆ ಅದೇ ಲೈನ್ ನಿವಾಸಿಗಳಾದ ಸಿಲಂಬರನ್, ಸ್ವಾಮಿನಾಥನ್, ಮಹೇಂದ್ರ ಎಂಬುವವರು ಕ್ಷುಲ್ಲಕ ಕಾರಣಕ್ಕೆ ದಾರಿ ತಡೆದು ಹಲ್ಲೆ ಮಾಡಿದ್ದು ಈ ಬಗ್ಗೆ ರಾಜು ರವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 02-02-2020 ರಂದು ಸೋಮವಾರಪೇಟೆ ತಾಲ್ಲೂಕು ಹೆಬ್ಬಾಲೆ ಗ್ರಾಮದ  ಬಳಿ ಕೆಎ-12-7900 ರ ಲಾರಿಯನ್ನು ಅದರ ಚಾಲಕ ರವಿ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆಯ ಬದಿಗೆ ಮಗುಚಿಬಿದ್ದ ಪರಿಣಾಮ ಲಾರಿಯಲ್ಲಿದ್ದ ಶಿವಣ್ಣ ಹಾಗೂ ಚಾಲಕ ಗಾಯಗೊಂಡಿದ್ದು ಈ ಬಗ್ಗೆ ಶಿವಣ್ಣರವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.