Crime News

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 02-02-2020 ರಂದು ಸೋಮವಾರಪೇಟೆ ತಾಲ್ಲೂಕು 7ನೇ ಹೊಸಕೋಟೆ ಗ್ರಾಮದ ಕಲ್ಲುಕೋರೆ ಜಂಕ್ಷನ್ ಬಳಿ ಕೆಎ-01-ಎಂಎ-3501 ರ ಕಾರನ್ನು ಅದರ ಚಾಲಕ ಕಿಟ್ಟಪ್ಪ ಎಂಬುವವರು ಅಡ್ಡರಸ್ತೆಯಿಂದ ಹೆದ್ದಾರಿ ರಸ್ತೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಹೆದ್ದಾರಿ ರಸ್ತೆಯಲ್ಲಿ ಹೋಗುತ್ತಿದ್ದ ಕೆಎ-12-ಎಸ್-1703 ರ ಬೈಕ್ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ಸವಾರ ಪವನ್ ಹಾಗೂ ಹಿಂಬದಿ ಸವಾರ ಭುವನ್ ಕುಮಾರ್ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನಿರಂಜನ್ ಎಂಬುವವರು ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

          ದಿನಾಂಕ: 03-02-2020 ರಂದು ವಿರಾಜಪೇಟೆ ತಾಲ್ಲೂಕು ಕಾರ್ಮಾಡು ಗ್ರಾಮದ ನಿವಾಸಿ ರಾಜು ಎಂಬುವವರು ಅವರ ಅಂಗಡಿಯ ಮುಂಭಾಗದಲ್ಲಿ ಅಕ್ರಮವಾಗಿ ಸಾರ್ವಜನಿಕರು ಮದ್ಯಸೇವನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದ ಪ್ರಕರಣವನ್ನು ಪೊನ್ನಂಪೇಟೆ ಠಾಣೆ ಪಿಎಸ್ಐ ಡಿ.ಕುಮಾರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ರಾಜು ರವರ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.