Crime News

ವ್ಯಕ್ತಿ ಆತ್ಮಹತ್ಯೆ

          ದಿನಾಂಕ: 03-02-2020 ರಂದು ಮಡಿಕೇರಿ ತಾಲ್ಲೂಕು ನರಿಯಂದಡ ಗ್ರಾಮದ ನಿವಾಸಿ ಗಣಪತಿ ಎಂಬುವವರು ಅನಾರೋಗ್ಯವಿದ್ದುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತ ಪತ್ನಿ ನೀಡಿದ ದೂರಿನ ಮೇರೆ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 03-02-2020 ರಂದು ವಿರಾಜಪೇಟೆ ಪಟ್ಟಣದ ಮೀನುಪೇಟೆ ನಿವಾಸಿ ಮಂಜುನಾಥ ಎಂಬುವವರು ಗಾಯತ್ರಿ ಪೆಟ್ರೋಲ್ ಬಂಕ್ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಹಿಂಬದಿಯಿಂದ ಯಾವುದೋ ವಾಹನವನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಡಿಕ್ಕಿಪಡಿಸಿ ವಾಹನ ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ಮಂಜುನಾಥ ರವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.