Crime News

ಬೈಕ್ ಕಳವು ಪ್ರಕರಣ

          ದಿನಾಂಕ: 22-02-2020 ರಂದು ಸೋಮವಾರಪೇಟೆ ತಾಲ್ಲೂಕು ಮೂದ್ರವಳ್ಳಿ ಗ್ರಾಮದ ನಿವಾಸಿ ಪುಟ್ಟಪ್ಪ ಎಂಬುವವರು ಶನಿವಾರಸಂತೆ ಠಾಣೆ ಮುಂಭಾಗದ ರಸ್ತೆಯಲ್ಲಿ ನಿಲ್ಲಿಸಿದ್ದ ಕೆಎ-12-ಜೆ-8374 ರ ಬೈಕನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಪುಟ್ಟಪ್ಪ ರವರು ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೊಲೆ ಪ್ರಕರಣ

          ದಿನಾಂಕ: 22-02-2020 ರಂದು ಸಂಜೆ ವಿರಾಜಪೇಟೆ ತಾಲ್ಲೂಕು ಕೊಲ್ಲಿ ಹಾಡಿ ಕಾರ್ಮಾಡು ಗ್ರಾಮದ ನಿವಾಸಿ ಜೇನುಕುರುಬರ ರವಿ ಎಂಬುವವರು ಅವರ ಪತ್ನಿ ಶ್ರೀಮತಿ ಸುಶೀಲ ಎಂಬುವವರೊಂದಿಗೆ ಜಗಳ ಮಾಡಿ ದೊಣ್ಣೆಯಿಂದ ಹಲ್ಲೆ ಮಾಡಿದ ಪರಿಣಾಮ ಸುಶೀಲರವರು ಗಾಯಗೊಂಡು ಮೃತಪಟ್ಟಿದ್ದು ಈ ಬಗ್ಗೆ ಮೃತರ ತಾಯಿ ನೀಡಿದ ಪುಕಾರಿನ ಮೇರ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.