Crime News

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 26-02-2020 ರಂದು ಮಡಿಕೇರಿ ತಾಲ್ಲೂಕು ಈರೆಳವಳಮುಡಿ  ಗ್ರಾಮದ ಅಬ್ಯಾಲ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-19-ಎಫ್-2981 ರ ಬಸ್ಸನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಎಂಎ-5709 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿದ್ದ ಚಾಲಕ ಸಚಿನ್ ಹಾಗೂ ಆಕಾಶ್ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿಗೆ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

          ದಿನಾಂಕ: 25-02-2020 ರಂದು ಮಡಿಕೇರಿ ತಾಲ್ಲೂಕು ಅವಂದೂರು ಗ್ರಾಮದ ನಿವಾಸಿ ಉಲ್ಲಾಸ ಎಂಬುವವರು ಗ್ರಾಮದ ದೇವಸ್ಥಾನದ ಪೂಜಾ ಕಾರ್ಯದ ನಿಮಿತ್ತ ಹೋಗುತ್ತಿರುವಾಗ ಅದೇ ಗ್ರಾಮದ ನಿವಾಸಿ ಕೇಶವ ಎಂಬುವವರು ಕ್ಷುಲ್ಲಕ ಕಾರಣಕ್ಕೆ ದಾರಿ ತಡೆದು ನಿಲ್ಲಿಸಿ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಬೆದರಿಕೆ ಹಾಕಿದ್ದು ಈ ಬಗ್ಗೆ ಉಲ್ಲಾಸ ರವರು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರರಕಣ

          ದಿನಾಂಕ: 25-02-2020 ರಂದು ಸೋಮವಾರಪೇಟೆ ತಾಲ್ಲೂಕು ಕೂಡುಮಂಗಳೂರು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-09-ಇಎ-0805 ರ ಬೈಕನ್ನು ಅದರ ಸವಾರ ಅವಿನಾಶ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ  ಮಾಡಿಕೊಂಡು ಹೋಗಿ ಎಂ.ಜಿ ಯೋಗೇಶ್ ಕುಮಾರ್ ಎಂಬುವವರಿಗೆ ಡಿಕ್ಕಿಪಡಿಸಿ ಬೈಕ್ ಸಹಿತ ರಸ್ತೆಗೆ ಬಿದ್ದ ಪರಿಣಾಮ ಬೈಕ್ ಸವಾರ ಹಾಗೂ ಯೋಗೇಶ್ ಕುಮಾರ್ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿಗೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 25-02-2020 ರಂದು ಸೋಮವಾರಪೇಟೆ ತಾಲ್ಲೂಕು ಕೂಡುಮಂಗಳೂರು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಜಿಎ-08-ಎಫ್-4517 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ನಲ್ಲಿದ್ದ  ಎಂ.ಹೆಚ್ ಹರೀಶ್ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.