Crime News
ರಸ್ತೆ ಅಪಘಾತ ಪ್ರಕರಣ
ದಿನಾಂಕ: 01-03-2020 ರಂದು ಮಡಿಕೇರಿ ತಾಲ್ಲೂಕು ನಾಪೋಕ್ಲು ಗ್ರಾಮದ ಚೋನೆಕೆರೆ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-3-ಇಇ-9438 ರ ಬೈಕನ್ನು ಅದರ ಸವಾರ ಸುರೇಶ ಎಂಬುವವರು ಅತಿವೇಗ ಮತ್ತು ಅಜಾರೂಕತೆಯಿಂದ ಚಾಲನೆ ಮಾಡಿ ಕೆಎಲ್-73-ಸಿ-2635 ರ ಕಾರಿಗೆ ಡಿಕ್ಕಿಪಡಿಸಿ ಕೆಳಗೆ ಬಿದ್ದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದು ಈ ಬಗ್ಗೆ ಕಾರು ಚಾಲಕ ಕೆ.ಎಂ ಇಸ್ಮಾಯಿಲ್ ಎಂಬುವವರು ನೀಡಿದ ಪುಕಾರಿನ ಮೇರೆ ನಾಪೋಕ್ಲು ಠಾಣೆ ಪೊಲಿಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಹಲ್ಲೆ ಪ್ರಕರಣ
ದಿನಾಂಕ: 01-03-2020 ರಂದು ಸೋಮವಾರಪೇಟೆ ತಾಲ್ಲೂಕು ಹುದುಗೂರು ಗ್ರಾಮದ ನಿವಾಸಿ ಪ್ರದೀಪ ಎಂಬುವವರು ಕೆಲಸ ಮುಗಿಸಿ ತಂದೆ ಮತ್ತು ಅಣ್ಣನೊಂದಿಗೆ ಮನೆಗೆ ಹೋಗುತ್ತಿರುವಾಗ ಅದೇ ಗ್ರಾಮದ ನಿವಾಸಿಗಳಾದ ರವಿ ಮತ್ತು ಆನಂದ ಎಂಬುವವರು ಬೈಕ್ ನಲ್ಲಿ ಬಂದು ಮೋಟರ್ ಹಣದ ವಿಚಾರದಲ್ಲಿ ಜಗಳ ಮಾಡಿ ಅವಾಚ್ಯ ಪದಗಳಿಂದ ಬೈದು ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿ ಗಾಯಗೊಳಿಸಿ ಜೊತೆಯಲ್ಲಿದ್ದ ತಂದೆ ಹಾಗೂ ಅಣ್ಣನಿಗೆ ಕೈಯಿಂದ ಹಲ್ಲೆ ಮಾಡಿ ನೋವುಪಡಿಸಿ ಬೆದರಿಕೆ ಹಾಕಿದ್ದು ಈ ಬಗ್ಗೆ ಪ್ರದೀಪ್ ರವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಹಲ್ಲೆ ಪ್ರಕರಣ
ದಿನಾಂಕ: 01-03-2020 ರಂದು ಸೋಮವಾರಪೇಟೆ ತಾಲ್ಲೂಕು ಯಲಕನೂರು ಗ್ರಾಮದ ನಿವಾಸಿ ಲಿತಿನ್ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ಪರಮೇಶ್ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಕಲ್ಲಿನಿಂದ ಹಲ್ಲೆ ಮಾಡಿ ಬೆದರಿಕೆ ಹಾಕಿದ್ದು ಈ ಬಗ್ಗೆ ಲಿತಿನ್ ರವರು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಕಳವು ಪ್ರಕರಣ
ದಿನಾಂಕ: 01-03-2020 ರಂದು ವಿರಾಜಪೇಟೆ ತಾಲ್ಲೂಕು ಮತ್ತೂರು ಗ್ರಾಮದ ನಿವಾಸಿ ಶ್ರೀಮತಿ ಚೈತ್ರ ಎಂಬುವವರು ಬೆಳಿಗ್ಗೆ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗಿ ವಾಪಾಸ್ಸು ಸಂಜೆ ಮನೆಗೆ ಬಂದು ನೋಡಿದಾಗ ಯಾರೋ ಕಳ್ಳರು ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿ ಬೀರುವಿನಲ್ಲಿ ಇಟ್ಟಿದ್ದ 10,000 ರೂ ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.