Crime News

ಆಕಸ್ಮಿಕ ಸಾವು

ದಿನಾಂಕ: 04-03-2020 ರಂದು ದುಬಾರೆ ಸಾಕಾನೆ ಶಿಬಿರಕ್ಕೆ ಗೋಣಿಕೊಪ್ಪ ಲಯನ್ಸ್ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಪ್ರವಾಸ ಏರ್ಪಡಿಸಿದ್ದು ದುಬಾರೆಯಲ್ಲಿ ಶಾಲಾಮಕ್ಕಳೊಂದಿಗೆ ಹೊಳೆ ದಾಟುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಬಿದ್ದು ಮುಳುಗಿ ಸಾವನ್ನಪ್ಪಿದ್ದು ಈ ಬಗ್ಗೆ ಹರೀಶ್ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲಿಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

          ದಿನಾಂಕ: 04-03-2020 ರಂದು ಸೋಮವಾರಪೇಟೆ ತಾಲ್ಲೂಕು ಹೊನ್ನವಳ್ಳಿ ಗ್ರಾಮದ ನಿವಾಸಿ ಶ್ರೀಮತಿ ಮಾಚಮ್ಮ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ಪ್ರದೀಪ್ ಎಂಬುವವರು ಅವರ ತಂದೆಯನ್ನು ಕಾಳು ಮೆಣಸು ಕುಯ್ಯುವ ಕೆಲಸಕ್ಕೆ ಕರೆದುಕೊಂಡು ಹೋದ ಕಾರಣಕ್ಕೆ ಜಗಳಮಾಡಿ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಾಫಿ ಕಳವು ಪ್ರಕರಣ

          ಸೋಮವಾರಪೇಟೆ ತಾಲ್ಲೂಕು ದೊಡ್ಡಮಳ್ತೆ ಗ್ರಾಮದ ಪೌತಿ ಕವಿತಾ ಎಂಬುವವರಿಗೆ ಸೇರಿದ ಕಾಫಿ ತೋಟವನ್ನು ಕವಿತಾ ರವರ ಅಕ್ಕ ಶ್ರೀಮತಿ ವನಿತಾ ಎಂಬುವವರು ನೋಡಿಕೊಳ್ಳುತ್ತಿದ್ದು ದಿನಾಂಕ: 04-03-2020 ರಂದು ದೊಡ್ಡಮಳ್ತೆಯ ತೋಟಕ್ಕೆ ಹೋಗಿ ನೋಡಿದಾಗ ಕಾಫಿ ಗಿಡದಿಂದ ಕಾಫಿ ಕುಯ್ದಿರುವುದ ಕಂಡುಬಂದಿರುತ್ತದೆ. ದೊಡ್ಡಮಳ್ತೆ ಗ್ರಾಮದ ಶ್ರೀಮತಿ ಶಾಂತ ಮತ್ತು ಅವರ ಮೈದುನ ವಸಂತ ಎಂಬುವವರು ಕಳ್ಳತನ ಮಾಡಿರುವುದಾಗಿ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 04-03-2020 ರಂದು ಸೋಮವಾರಪೇಟೆ ತಾಲ್ಲೂಕು ಆನೆಕಾಡು ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-12 ಜೆಡ್-0243 ಕಾರನ್ನು 7ನೇ ಹೊಸಕೋಟೆ ನಿವಾಸಿ ಅಬೂಬಕರ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಚಾಲಕ ಮತ್ತು ಹ್ಯಾರಿಸ್ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ಕುಶಾಲನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತವೆ.