Crime News

ರಸ್ತೆ ಅಪಘಾತ ಪ್ರಕರಣ

          ದಿನಾಂಕ: ದಿನಾಂಕ: 06-03-2020 ರಂದು ವಿರಾಜಪೇಟೆ ತಾಲ್ಲೂಕು ವಾಟೆ ಕೊಲ್ಲಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಎ-4864 ರ ಟಿಪ್ಪರ್ ಲಾರಿಯನ್ನು ಅದರ ಚಾಲಕ ವಾಹಿದ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಎದುರುಗಡೆಯಿಂದ ಪ್ರದೀಪ್ ಎಂಬುವವರು ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಬೈಕ್ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡಿದ್ದು ಈ ಬಗ್ಗೆ ಪ್ರದೀಪ್ ರವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಬೈಕ್ ಡಿಕ್ಕಿ, ಪಾದಚಾರಿ ಸಾವು.

          ದಿನಾಂಕ: 06-03-2020 ರಂದು ಸೋಮವಾರಪೇಟೆ ತಾಲ್ಲೂಕು ಕೂಡುಮಂಗಳೂರು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-13-ಇಇ-7118 ರ ಬೈಕನ್ನು ಅದರ ಸವಾರನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ರಸ್ತೆ ದಾಟುತ್ತಿದ್ದ ಶ್ರೀಮತಿ ಜಯಮ್ಮ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡವರನ್ನು ಕುಶಾಲನಗರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಗಾಯಾಳೂ ಮೃತಪಟ್ಟಿದ್ದು ಈ ಬಗ್ಗೆ ಮೃತರ ಮಗ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 06-03-2020 ರಂದು ಸೋಮವಾರಪೇಟೆ ತಾಲ್ಲೂಕು ಗೋಪಾಲಪುರ ಗ್ರಾಮದ ಬಳಿ ಮುಖ್ಯಯ ರಸ್ತೆಯಲ್ಲಿ ಕೆಎ-02-ಎಂಎಂ-0807  ರ ಎಂ. ಮಂಜುನಾಥ ಎಂಬುವವರು ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯ ಮೋರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರು ಜಖಂಗೊಂಡು ಕಾರಿನಲ್ಲಿದ್ದ ಚಾಲಕ ಹಾಗೂ ವಿ ಮಂಜುನಾಥ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 06-03-2020 ರಂದು ಕುಶಾಲನಗರ ಪಟ್ಟಣದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-12-ಎಂಎ-7497 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಬೈಕ್ ಡಿಕ್ಕಿಪಡಿಸಿ ಕಾರನ್ನು ನಿಲ್ಲಿಸದೆ ಹೋಗಿದ್ದು, ಬೈಕ್ ನಲ್ಲಿದ್ದ ಸವಾರ ಹೇಮಂತ್ ಹಾಗೂ ಹಿಂಬದಿ ಸವಾರ ಸೋಮಶೇಖರ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ಬೈಕ್ ಸವಾರ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮರಳು ಸಂಗ್ರಹಣೆ ಪ್ರಕರಣ:

ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಶ್ರೀಮಂಗಲ ಹರಿಹರ  ಗ್ರಾಮದಲ್ಲಿ ಲಕ್ಷ್ಮಣತೀರ್ಥ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಂಗ್ರಹಿಸಿಟ್ಟಿದ್ದ  ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಕೊಡಗು ಜಿಲ್ಲಾ ಡಿಸಿಐಬಿ ಘಟಕದ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆ ದಿನಾಂಕ 05-03-2020 ರಂದು ಶ್ರೀಮಂಗಲ ಹರಿಹರ ಗ್ರಾಮದ ಚೆಮ್ಮುಣಿರ ಹರೀಶ ಎಂಬುವವರು  ಅವರ ಬಯಲು ಗದ್ದೆಯ ಸಮೀಪದಲ್ಲಿ ಹರಿಯುತ್ತಿರುವ ಲಕ್ಷ್ಮಣತೀರ್ಥ ನದಿಯಿಂದ ಅಕ್ರಮವಾಗಿ ಮರಳು ತೆಗೆಯಿಸಿ ಸಂಗ್ರಹಿಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿ ಸ್ಥಳದಲ್ಲಿದ್ದು ಸುಮಾರು 5 ರಿಂದ 6 ಲಾರಿಗಳಷ್ಟು ಮರಳು ಹಾಗೂ ಮರಳು ತೆಗೆಯಲು ಬಳಸುತ್ತಿದ್ದ ನಾಲ್ಕು ಕಬ್ಬಿಣದ ತೆಪ್ಪಗಳನ್ನು ವಶಕ್ಕೆ ಪಡೆದಿದ್ದು ಆರೋಪಿ ಚೆಮ್ಮುಣಿರ ಹರೀಶ ರವರ ವಿರುದ್ದ ಶ್ರೀಮಂಗಲ ಠಾಣೆಯಲ್ಲಿ ಮೊಖದ್ದಮೆ  ದಾಖಲಿಸಲಾಗಿದೆ.      ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಸುಮನ್ ಡಿ.ಪಿ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಡಿಸಿಐಬಿಯ ಪ್ರಭಾರ ಇನ್ಸ್ ಪೆಕ್ಟರ್ ಹೆಚ್.ವಿ ಚಂದ್ರಶೇಖರ್ ಮತ್ತು ಸಿಬ್ಬಂದಿಯವರಾದ ಕೆ.ವೈ ಹಮೀದ್, ಕೆ.ಎಸ್ ಅನಿಲ್ ಕುಮಾರ್, ವಿ.ಜಿ ವೆಂಕಟೇಶ್, ಬಿ.ಎಲ್ ಯೋಗೇಶ್ ಕುಮಾರ್, ಕೆ.ಆರ್ ವಸಂತ, ಎಂ.ಎನ್ ನಿರಂಜನ್, ಬಿ.ಜೆ ಶರತ್ ರೈ, ಹಾಗೂ ಚಾಲಕ ಕೆ.ಎಸ್ ಶಶಿಕುಮಾರ್ ರವರುಗಳು ಕಾಯರ್ಚರಣೆ ನಡೆಸಿದ್ದು ಇವರ ಕಾರ್ಯವನ್ನು ಪೊಲೀಸ್ ಅಧೀಕ್ಷಕರು ಕೊಡಗು ಜಿಲ್ಲೆರವರು ಶ್ಲಾಘಿಸಿರುತ್ತಾರೆ. ಶ್ಲಾಘಿಸಲಾಗಿದೆ.