Crime News

ವ್ಯಕ್ತಿ ಆತ್ಮಹತ್ಯೆ

ದಿನಾಂಕ 08/03/2020ರ ರಾತ್ರಿ ವೇಳೆ ವಿರಾಜಪೇಟೆ ಬಳಿಯ ಬಿಳುಗುಂದ ಗ್ರಾಮದ ನಿವಾಸಿ ಸಂಪತ್ ಎಂಬವರು ಅವರ ಮನೆಯ ಮಲಗುವ ಕೋಣೆಯ ಮೇಲ್ಛಾವಣಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಸಂಪತ್‌ ಯಾವುದೋ ವಿಷಯಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದಾಗಿ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ, ಕೊಲೆ ಬೆದರಿಕೆ

ದಿನಾಂಕ 06/03/2020ರಂದು ಶ್ರೀಮಂಗಲ ಬಳಿಯ ಹೈಸೊಡ್ಲೂರು ಗ್ರಾಮದ ನಿವಾಸಿ ಕೋಡಂಗಡ ಮಾದಯ್ಯ ಎಂಬವರ ಮೇಲೆ ಅವರ ಮಗ ಅಶೋಕ ಎಂಬಾತ ಮದ್ಯಪಾನ ಮಾಡಲು ಹಣ ನೀಡುವಂತೆ ಪೀಡಿಸಿ ಹಣ ನೀಡದ ಕಾರಣಕ್ಕೆ ಮಾದಯ್ಯನವರ ಮೇಲೆ ಕೈಯಿಂದ ಹೊಡೆದು ಹಲ್ಲೆ ಮಾಡಿ ತಾಯಿ ಉಮ್ಮಕ್ಕರವರನ್ನು ಕೋವಿಯಿಂದ ಗುಂಡು ಹೊಡೆದು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ನೀಡಿದ ದೂರಿನ ಮೇರೆಗೆ ಶ್ರೀಮಂಗಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವ್ಯಕ್ತಿ ಆತ್ಮಹತ್ಯೆ

ದಿನಾಂಕ 08/03/2020ರಂದು ಸಿದ್ದಾಪುರ ಬಳಿಯ ಬಾಡಗ ಬಾಣಂಗಾಲ ಗ್ರಾಮದ ಮಾರ್ಗೊಲ್ಲಿ ತೋಟದ ಕಾರ್ಮಿಕ ಮೂಲತಃ ಪಶ್ಚಿಮ ಬಂಗಾಳದ ನಾಡಿಯ ಜಿಲ್ಲೆಯ ನಿವಾಸಿ ಸಫನ್‌ ರಾಯ್ ಎಂಬವರು ಕಾಫಿ ತೋಟದಲ್ಲಿ ಕಾಫಿ ಗಿಡದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಸಫನ್‌ ರಾಯ್ ರವರು ವಿಪರೀತ ಮದ್ಯ ವ್ಯಸನಿಯಾಗಿದ್ದು ಆತನ ಅಜ್ಜಿ ಇತ್ತೀಚೆಗೆ ತೀರಿಕೊಂಡ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನೀಡಿದ ದೂರಿನ ಮೇರೆಗೆ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕುಸಿದು ಬಿದ್ದು ವ್ಯಕ್ತಿ ಸಾವು

ದಿನಾಂಕ 09/03/2020 ರಂದು ಭಾಗಮಂಡಲ ಬಳಿಯ ಸಣ್ಣಪುಲಿಕೋಟು ನಿವಾಸಿ ಬೊಮ್ಮಲಿಂಗಪ್ಪ ಎಂಬವರು ಕುಯ್ಯಮುಡಿ ಸೋಮಪ್ಪ ಎಂಬವರ ತೋಟದಲ್ಲಿ ಕಾಫಿ ಕುಯ್ಯುತ್ತಿರುವಾಗ ಕುಸಿದು ಬಿದ್ದು ಸಾವನ್ನಪ್ಪಿರುವುದಾಗಿ ನೀಡಿದ ದೂರಿನ ಮೇರೆ ಭಾಗಮಂಡಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ 08/03/2020 ರ ರಾತ್ರಿ ವೇಳೆ ನಾಪೋಕ್ಲು ಬಳಿಯ ಎಮ್ಮೆಮಾಡು ನಿವಾಸಿ ಮೊಯ್ದು ಎಂಬವರು ರಿಕ್ಷಾವೊಂದರಲ್ಲಿ ಎಮ್ಮೆಮಾಡಿನ ಚೆಂಬರಂಡ ಮಸೀದಿಯ ಪಕ್ಕದಲ್ಲಿ ಹೋಗುತ್ತಿರುವಾಗ ಅದೇ ಗ್ರಾಮದ ನಿವಾಸಿಗಳಾದ ಸತ್ತಾರ್ ಮತ್ತು ಶಾಕೀರ್ ಎಂಬವರುಗಳು ಸೇರಿಕೊಂಡು ಆಸ್ತಿಯ ವಿಚಾರದಲ್ಲಿ ಮೊಯ್ದುರವರೊಂದಿಗೆ ಜಗಳವಾಡಿ ದೊಣ್ಣೆ ಮತ್ತು ಕಬ್ಬಿಣದ ರಾಡಿನಿಂದ ಹೊಡೆದು ಕೊಲೆ ಯತ್ನ ಮಾಡಿರುವುದಾಗಿ ನೀಡಿದ ದೂರಿನ ಮೇರೆಗೆ ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.