Crime News

ಕಳವು ಪ್ರಕರಣ

          ದಿನಾಂಕ: 08-03-2020 ರಂದು ಸೋಮವಾರಪೇಟೆ ತಾಲ್ಲೂಕು ಬೆಟ್ಟದಳ್ಳಿ ಗ್ರಾಮದ ನಿವಾಸಿ ಶ್ರೀಮತಿ ಕಸ್ತೂರಿ ಎಂಬುವವರು ರಾತ್ರಿ ಮನೆಯಲ್ಲಿ ಮಲಗಿರುವಾಗ ಶಬ್ದವಾಗಿ ಎಚ್ಚರಗೊಂಡು ನೋಡಿದಾಗ ಯಾರೋ ಕಳ್ಳರು ಮನೆಯ ಒಳಗೆ ನುಗ್ಗಿ  ಬೀರುವಿನಲ್ಲಿ ಇಟ್ಟಿದ್ದ 36,000 ರೂ ಕಾಫಿ ಮಾರಿದ ಹಣವನ್ನು ಯಾರೋ ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ, ಬೈಕ್ ಸವಾರ ಸಾವು.

          ದಿನಾಂಕ: 10-03-2020 ರಂದು ಸೋಮವಾರಪೇಟೆ ತಾಲ್ಲೂಕು ಮುಳ್ಳುಸೋಗೆ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎಲ್-59-ಎಸ್-9060 ರ ಬೈಕನ್ನು ಅದರ ಸವಾರ ಜಿಜಿನ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಕೆಎ-35-735 ರ ಟಿಪ್ಪರ್ ಲಾರಿಯನ್ನು ತಿರುವಿನಲ್ಲಿ ಎಡಭಾಗದಿಂದ ಹಿಂದಿಕ್ಕಲು ಪ್ರಯತ್ನಿಸಿ ಲಾರಿಯ ಹಿಂಬದಿ ಚಕ್ರಕ್ಕೆ ಡಿಕ್ಕಿಯಾಗಿ ಲಾರಿಯಡಿಗೆ ಸಿಲುಕಿ ಗಾಯಗೊಂಡಿದ್ದವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬೈಕ್ ಸವಾರ ಮೃತಪಟ್ಟಿದ್ದು ಈ ಬಗ್ಗೆ ಮುಸ್ತಾಫ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬೈಕ್ ಡಿಕ್ಕಿ, ಪಾದಚಾರಿಗೆ ಗಾಯ

          ದಿನಾಂಕ: 10-03-2020 ರಂದು ವಿರಾಜಪೇಟೆ ತಾಲ್ಲೂಕು ಗೋಣಿಕೊಪ್ಪ ಗ್ರಾಮದ ಹರಿಶ್ಚಂದ್ರಪುರ ಮುಖ್ಯ ರಸ್ತೆಯಲ್ಲಿ ಕೆಎ-12-ಹೆಚ್-8939 ರ ಬೈಕನ್ನು ಅದರ ಸವಾಸ ಭರತ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಯ್ಯದ್ ಅಹಮ್ಮದ್ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.