Crime News

ಹಲ್ಲೆ ಪ್ರಕರಣ

          ದಿನಾಂಕ: 10-03-2020 ರಂದು ಮಡಿಕೇರಿ ತಾಲ್ಲೂಕು ಅವಂದೂರು ಗ್ರಾಮದ ನಿವಾಸಿ ಕೆ.ಬಿ ಮಾಚಯ್ಯ ಎಂಬುವವರ ಮನೆಗೆ ಅವರ ಪಕ್ಕದ ಮನೆಯ ನಿವಾಸಿಗಳಾದ ಜೀವನ್, ಕೃಷ್ಣಪ್ಪ ಮತ್ತು ಪಾರ್ವತಿ ಎಂಬುವವರು ಅಕ್ರಮ ಪ್ರವೇಶ ಮಾಡಿ ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಮಾಚಯ್ಯ, ಅವರ ಮೊಮ್ಮಗಳು ಹಾಗೂ ಜೀವನ್ ಎಂಬುವವರಿಗೆ ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

          ದಿನಾಂಕ: 10-03-2020 ರಂದು ರಾತ್ರಿ ವಿರಾಜಪೇಟೆ ತಾಲ್ಲೂಕು ಪೆರುಂಬಾಡಿ ಗ್ರಾಮದ ನಿವಾಸಿ ಸುರೇಶ್ ಎಂಬುವವರು ಮನೆಯಲ್ಲಿರುವಾಗ ಅವರ ತಂದೆ ರಾಜು  ಎಂಬುವವರು ಹಣದ ವಿಚಾರದಲ್ಲಿ ಜಗಳ ಮಾಡಿ ಕೊಲೆ ಕತ್ತಿಯಿಂದ ಹಲ್ಲೆ ಮಾಡಿ ಕೊಲೆ ಮಾಡಲು ಪ್ರಯತ್ನಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

          ದಿನಾಂಕ: 11-03-2020 ರಂದು ವಿರಾಜಪೇಟೆ ತಾಲ್ಲೂಕು ನಾಥಂಗಾಲ ಗ್ರಾಮದ ನಿವಾಸಿ ಶ್ರೀಮತಿ ಶ್ವೇತಾ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಮನು, ಪಾರ್ವತಿ ಮತ್ತು ರಾಜು ಎಂಬುವವರು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿ ದಾರಿ ತಡೆದು ಹಲ್ಲೆ ಮಾಡಿ ನೋವುಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಳವು ಪ್ರಕರಣ      

     ಸೋಮವಾರಪೇಟೆ ತಾಲ್ಲೂಕು ಊರುಗುತ್ತಿ ಗ್ರಾಮದ ನಿವಾಸಿ ಶ್ರೀಮತಿ ಜಯಮ್ಮ ಎಂಬುವವರು ಅವರ ಮನೆಯಲ್ಲಿ ಗಾಡ್ರೆಜ್ ಬೀರುವಿನಲ್ಲಿ ಚಿನ್ನದ ಓಲೆ ಮತ್ತು 10,000 ರೂ ನಗದು ಹಣವನ್ನು ಇಟ್ಟು ಕೀಯನ್ನು ಹಾಸಿಗೆ ದಿಂಬಿನ ಕೆಳಗೆ ಇಟ್ಟಿದ್ದರು. ದಿನಾಂಕ: 11-03-2020 ರಂದು ಬೆಳಿಗ್ಗೆ ಕೆಲಸಕ್ಕೆ ಹೋಗಿ ಸಂಜೆ ವಾಪಾಸ್ಸು ಬಂದು ನೋಡಿದಾಗ ಬೀರುವಿನಲ್ಲಿ ಇಟ್ಟಿದ್ದ ನಗದು ಸಹಿತ 22,000 ರೂ ಮೌಲ್ಯದ ಚಿನ್ನದ ಆಭರಣಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.