Crime News

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 14-03-2020 ರಂದು ಮಡಿಕೇರಿ ತಾಲ್ಲೂಕು ಕಾರುಗುಂದ ಗ್ರಾಮದ ಬಳಿ ಮುಖ್ಯರಸ್ತೆಯಲ್ಲಿ ಕೆಎ-21-9318 ರ ಪಿಕ್ ಅಪ್ ವಾಹನವನ್ನು ಅದರ ಚಾಲಕ ರಂಜನ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಎನ್-4205 ರ ಜೀಪಿಗ ಡಿಕ್ಕಿಪಡಿಸಿದ ಪರಿಣಾಮ ಜೀಪಿನಲ್ಲಿ ಪ್ರಯಾಣಿಸುತ್ತಿದ್ದ ಕೆ.ಎಂ ಪೂಣಚ್ಚ್ ಎಂಬುವವರ ಪತ್ನಿ ಗಾಯಗೊಂಡಿದ್ದು ಈ ಬಗ್ಗೆ ದಿನಾಂಕ: 17-03-2020 ರಂದು ನೀಡಿದ ಪುಕಾರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವ್ಯಕ್ತಿ ಆತ್ಮಹತ್ಯೆ

          ದಿನಾಂಕ: 17-03-2020 ರಂದು ಸೋಮವಾರಪೇಟೆ ತಾಲ್ಲೂಕು ನೆಲ್ಯಹುದಿಕೇರಿ ಗ್ರಾಮದ ನಿವಾಸಿ ರಾಜೇಶ್ ಎಂಬುವವರು ಅನಾರೋಗ್ಯಕ್ಕೆ ಚಿಕಿತ್ಸೆ ಪಡೆದರೂ ಗುಣಮುಖವಾಗದೇ ಇದ್ದುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತರ ಸಹೋದರ ಸುಬ್ರಮಣಿ ಎಂಬುವವರು ನೀಡಿದ ದೂರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

          ದಿನಾಂಕ: 16-03-2020 ರಂದು ಮಡಿಕೇರಿ ತಾಲ್ಲೂಕು ಕೆ.ನಿಡುಗಣೆ ಗ್ರಾಮದ ಭಗವತಿ ದೇವಸ್ಥಾನಕ್ಕೆ ಚೇತನ್ ಮತ್ತು ಅತನ ಚಲನ್ ಎಂಬುವವರು ಕಾರಿನಲ್ಲಿ ಹೋಗುತ್ತಿರುವಾಗ ಎದುಗಡೆಯಿಂದ ಮತ್ತೊಂದು ಕಾರಿನಲ್ಲಿ ಬರುತ್ತಿದ್ದ ಉದಿಯಂಡ ನೀರಜ್ ಬೋಪಣ್ಣ ಮತ್ತು ಇತರರು ಕಾರಿಗೆ ದಾರಿ ಕೊಡುವ ವಿಚಾರದಲ್ಲಿ ಕಾರನ್ನು ತಡೆದು ನಿಲ್ಲಿಸಿ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಕೊಲೆ ಬೆದರಿಕಡ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

          ದಿನಾಂಕ: 17-03-2020 ರಂದು ಸೋಮವಾರಪೇಟೆ ತಾಲ್ಲೂಕು ಅಭ್ಯತ್ ಮಂಗಲ ಗ್ರಾಮದ ಬಳಿ ಮುಖ್ಯರಸ್ತೆಯಲ್ಲಿ ಕೆಎ-50 ಜೆಡ್-0234 ರ ಕಾರನ್ನು ಅದರ ಚಾಲಕ ದಯಾನಂದ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಆರ್-1792 ರ ಸ್ಕೂಟರ್ ಗೆ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರ್ ಸವಾರ ರಾಧಾಕೃಷ್ಣ ಭಟ್ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

          ದಿನಾಂಕ: 17-03-2020 ರಂದು ಸೋಮವಾರಪೇಟೆ ತಾಲ್ಲೂಕು ಕಣಿವೆ ಗ್ರಾಮದ ನಿವಾಸಿ ರಾಕೇಶ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಕಿರಣ, ಹರೀಶ, ಚೇತನ ಮತ್ತು ದಿಲೀಪ ಎಂಬುವವರೊಂದಿಗೆ ಮಾತನಾಡಿಕೊಂಡಿರುವಾಗ ವಿನಾ ಕಾರಣ ಜಗಳ ಮಾಡಿ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ರಾಕೇಶ್ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.