Crime News

ಹಲ್ಲೆ ಪ್ರಕರಣ

ದಿನಾಂಕ 24/03/2020 ರಂದು ಸೋಮವಾರಪೇಟೆ ಬಳಿಯ ತೋಳೂರು ಶೆಟ್ಟಳ್ಳಿ ಗ್ರಾಮದ ನಿವಾಸಿ ಭಾಗ್ಯ ಎಂಬವರೊಂದಿಗೆ ಅವರ ನೆರೆಮೆನೆಯ ಮಹೇಶ, ದಿವ್ಯ ಮತ್ತು ಕೌಶಿಕ್ ಎಂಬವರು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ಹೆಂಚಿನ ತುಂಡಿನಿಂದ ಹೊಡೆದು ಹಲ್ಲೆ ಮಾಡಿರುವುದಾಗಿ ನೀಡಿದ ದೂರಿನ ಮೇರೆಗೆ ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬೆಂಕಿ ಆಕಸ್ಮಿಕ, ಸಾವು

ದಿನಾಂಕ 03/03/2020ರಂದು ಶ್ರೀಮಂಗಲ ಬಳೀಯ ಬೀರುಗ ನಿವಾಸಿ ಪಣಿ ಎರವರ ಮಂಜು ಎಂಬವರು ಮನೆಯಲ್ಲಿ ಒಲೆಯ ಮುಂದೆ ಕುಳಿತು ಬೆಂಕಿಯಲ್ಲಿ ಮೈ ಕಾಯಿಸಿಕೊಳ್ಳುತ್ತಿದ್ದಾಗ ಆಕಸ್ಮಿಕವಾಗಿ ಬಟ್ಟೆಗೆ ಬೆಂಕಿ ಹತ್ತಿಕೊಂಡು ತೀವ್ರವಾಗಿ ಗಾಯಗೊಂಡ ಮಂಜುರವರನ್ನು ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ 24/03/2020ರಂದು ಮಂಜುರವರು ಮೃತರಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಶ್ರೀಮಂಗಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.