Crime News

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 24-04-2020 ರಂದು ವಿರಾಜಪೇಟೆ ತಾಲ್ಲೂಕು ಗೋಣಿಕೊಪ್ಪ ಬೈಪಾಸ್ ರಸ್ತೆಯಲ್ಲಿ ಎನ್.ಡಿ ಉತ್ತಪ್ಪ ಎಂಬುವವರು ನಡೆದುಕೊಂಡು ಹೋಗುತ್ತಿರುವಾಗ ಕೆಎ-04-ಜೆಡ್-1623 ರ ಕಾರನ್ನು ಅದರ ಚಾಲಕ ನೌಫಲ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಡಿಕ್ಕಿಪಡಿಸಿದ ಪರಿಣಾಮ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಉತ್ತಪ್ಪ ರವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಸಾಗಾಟ ಪ್ರಕರಣ

                ದಿನಾಂಕ: 24-04-2020 ರಂದು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್ಐ ವೀಣಾನಾಯಕ್ ರವರಿಗೆ ಬಂದ ಖಚಿತ ವರ್ತಮಾನದ ಮೇರೆ ಸಿಬ್ಬಂದಿಯವರೊಂದಿಗೆ ಪ್ರಕರಣ ಪತ್ತೆಗೆ ತೆರಳಿ ಕೆಎ-12-ಎ-9515 ರ ಪಿಕ್ ಅಪ್ ವಾಹನದಲ್ಲಿ  ಅಕ್ರಮವಾಗಿ 3.ಲೀ ಕಳ್ಳಭಟ್ಟಿ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಮಾಡಿ ಸಿ.ಜೆ ವಿನ್ಸೆಂಟ್ ಮತ್ತು ಟಿ.ಎಂ ನಂದ ಕುಮಾರ ಎಂಬುವವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 20-04-2020 ರಂದು ವಿರಾಜಪೇಟೆ ಪಟ್ಟಣದ ಶಿವಕೇರಿ ಬಳಿ ಮುಖ್ಯ ರಸ್ತೆಯಲ್ಲಿ ಶ್ರೀಮತಿ ಸೀತಮ್ಮ ಎಂಬುವವರು ನಡೆದುಕೊಂಡು ಹೋಗುತ್ತಿರುವಾಗ ಕೆಎ-12-ಪಿ-5659 ರ ಪಿಕ್ ಅಪ್ ವಾಹನವನ್ನು ಅದರ ಚಾಲಕ ಸತೀಶ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಡಿಕ್ಕಿಪಡಿಸಿದ ಪರಿಣಾಮ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.