Crime News

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 04-05-2020 ರಂದು ವಿರಾಜಪೇಟೆ ತಾಲ್ಲೂಕು ಐಮಂಗಲ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಆರ್-7304 ರ ಬೈಕನ್ನು ಅದರ ಸವಾರ ಮೋಹನ್ ಕಿಶನ್ ಎಂಬುವವರು ಮುಂದೆ ಹೋಗುತ್ತಿದ್ದ ಅಟೋ ರಿಕ್ಷಾ ಹಿಂದಿಕ್ಕುವಾಗ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದರಿಂದ ಬೈಕ್ ಸವಾರ ಹಾಗೂ ಹಿಂಬದಿ ಸವಾರ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಆಟೋ ಚಾಲಕ ಹಮೀದ್ ಎಂಬುವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 04-05-2020 ರಂದು ವಿರಾಜಪೇಟೆ ತಾಲ್ಲೂಕು ಕೆದಮುಳ್ಳೂರು ಗ್ರಾಮದ ನಿವಾಸಿ ಗಿರೀಶ್ ಗ್ರಿಗೋರಿ ಎಂಬುವವರು ಅವರ ತಾಯಿಯವರಿಗೆ ಅದೇ ಗ್ರಾಮದ ನಿವಾಸಿ ಪೌಲ್ ಕುಮಾರ್ ಎಂಬುವವರು ಅವಾಚ್ಯ ಪದಗಳಿಂದ ಬೈಯ್ದು ಜಗಳ ಮಾಡುತ್ತಿದ್ದುದನ್ನು ಕೇಳಿದಾಗ ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬೈಕ್ ಗೆ ಡಿಕ್ಕಿಪಡಿಸಿ ಕೊಲೆ ಯತ್ನ ಪ್ರಕರಣ

            ದಿನಾಂಕ: 04-05-2020 ರಂದು ವಿರಾಜಪೇಟೆ ತಾಲ್ಲೂಕು ಧನುಗಾಲ ಗ್ರಾಮದ ರುದ್ರಬಿಡು ಗ್ರಾಮದ ನಿವಾಸಿ ರತನ್ ಎಂಬುವವರು ಕೆಎ-12- ಆರ್-8081 ರ ಬೈಕ್ ನಲ್ಲಿ ಅವರ ಮನೆಗೆ ಹೋಗುತ್ತಿರುವಾಗ ಅದೇ ಗ್ರಾಮದ ನಿವಾಸಿ ಅನುಕುಮಾರ್ ಎಂಬುವವರು ಎದುರುಗಡೆಯಿಂದ ಕೆಎ-12-ಎಂ-4821 ರ ಕಾರಿನಲ್ಲಿ ಬಂದು ಬೈಕ್ ಗೆ ಡಿಕ್ಕಿಪಡಿಸಿ ಕೊಲೆ ಮಾಡುವ ಉದ್ದೇಶದಿಂದ ಏಕಾಏಕಿ ಬೈಕ್ ಕಡೆಗೆ ಕಾರನ್ನು ಚಾಲಿಸಿದಾಗ ಬೈಕ್ ರಸ್ತೆ ಬದಿಯ ಚರಂಡಿಗೆ ಬಿದ್ದು ಬೈಕ್ ಸವಾರ ಹಾಗೂ ಹಿಂಬಂದಿ ಸವಾರ ಲವ ಎಂಬುವವರು ಗಾಯಗೊಂಡಿರುತ್ತಾರೆ. ನಂತರ ಕಾರನ್ನು ನಿಲ್ಲಿಸದೇ ಹೋಗುತ್ತಿದ್ದಾಗ ತಡೆದು ನಿಲ್ಲಿಸಿ ಕೇಳಿದಾಗ ಕೊಲೆ ಬೆದರಿಕೆ ಹಾಕಿ ಭುಜಕ್ಕೆ ಹಲ್ಲಿನಿಂದ ಕಚ್ಚಿ ಗಾಯಗೊಳಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 04-05-2020 ರಂದು ವಿರಾಜಪೇಟೆ ತಾಲ್ಲೂಕು ಗೋಣಿಕೊಪ್ಪ ಗ್ರಾಮದ ಮೋರ್ ಕಾಂಪ್ಲೆಕ್ಸ್ ಬಳಿ ರಸ್ತೆಯಲ್ಲಿ ಕೆಎ-12-ಬಿ-0107 ರ ಪಿಕ್ ಅಪ್ ವಾಹನ ಚಾಲಕ ಸೌಕತ್ ಅಲಿ ಎಂಬುವವರು  ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-41-ಹೆಚ್-6077 ರ ಸ್ಕೂಟರ್ ಗೆ ಡಿಕ್ಕಿಪಡಿಸಿದ ಪರಿಣಾಮ ವಿಷ್ಣು ಎಂಬುವವರು ಕೆಳಗೆ ಬಿದ್ದು ಗಾಯಗೊಂಡಿದ್ದರು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 04-05-2020 ರಂದು ಸೋಮವಾರಪೇಟೆ ತಾಲ್ಲೂಕು ಕೂಡ್ಲೂರು ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-12-ಎಂಎ-6072 ರ ಕಾರನ್ನು ಅದರ ಚಾಲಕ ನಂದಕುಮಾರ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-45-ಎಲ್-1876 ರ ಬೈಕ್ ಗೆ ಡಿಕ್ಕಿಪಡಿಸಿದ ಪರಿಣಾಮ ಅಜಿತ್ ಎಂಬುವವರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮರಳು ಸಾಗಾಟ ಪ್ರಕರಣ

            ದಿನಾಂಕ: 04-05-2020 ರಂದು ಸೋಮವಾರಪೇಟೆ ಠಾಣಾ ಪಿಎಸ್ಐ ಶಿವಶಂಕರ್ ರವರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ಸೋಮವಾರಪೇಟೆ ತಾಲ್ಲೂಕು ಬಿಳಿಗೇರಿ ಗ್ರಾಮದ ನಂದಿಮೊಟ್ಟೆ ಹೊಳೆಯಿಂದ ಸರ್ಕಾರದ ಪರವಾನಗಿ ಇಲ್ಲದೇ ಅಕ್ರಮವಾಗಿ ಮರಳನ್ನು ಕಳ್ಳತನ ಮಾಡಿ ಕೆಎ-12-ಎ-1564 ರ ಪಿಕ್ ಅಪ್ ವಾಹನದಲ್ಲಿ ಸಾಗಾಟ ಮಾಡಲು ತಂಬಿಸುತ್ತಿದ್ದ ಪ್ರಕರಣವನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 04-05-2020 ರಂದು ಸೋಮವಾರಪೇಟೆ ತಾಲ್ಲೂಕು ಗೊಂದಿಬಸವನಹಳ್ಳಿ ಗ್ರಾಮದ ನಿವಾಸಿ ನಂದೀಶ ಎಂಬುವವರು ಗ್ರಾಮದ ದೊಡ್ಡಮ್ಮ ದೇವಸ್ಥಾನದ ಬಳಿ ನಡೆದುಕೊಂಡು ಹೋಗುತ್ತಿರುವಾಗ ಅದೇ ಗ್ರಾಮದ ನಿವಾಸಿಗಳಾದ ಕಿರಣ,ನವೀನ್, ವಿನೋದ ಮತ್ತು ಇತರರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಗಾಯಗೊಳಿಸಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ: 04-05-2020 ರಂದು ಸೋಮವಾರಪೇಟೆ ತಾಲ್ಲೂಕು ಕಾರೆಕೊಪ್ಪ ಗ್ರಾಮದ ನಿವಾಸಿ ರಾಮಸ್ವಾಮಿ ಎಂಬುವವರಿಗೆ  ಅವರ ಪಕ್ಕದ ಮನೆಯ ವಾಸಿಗಳಾದ ರಾಜು ಮತ್ತು ಶಶಿಕುಮಾರ್ ಎಂಬುವವರು ಬೇಲಿ ವಿಚಾರದಲ್ಲಿ ಜಗಳ ಮಾಡಿ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 04-05-2020 ರಂದು ಸೋಮವಾರಪೇಟೆ ತಾಲ್ಲೂಕು ಬಸವನಹಳ್ಳಿ ಗ್ರಾಮದ ನಿವಾಸಿ ಪ್ರವೀಣ್ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ದಿಲೀಪ್,ಪ್ರತಾಪ್ ಮತ್ತು ಅವಿನಾಷ್ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.