Crime News
ವ್ಯಕ್ತಿ ಆತ್ಮಹತ್ಯೆ
ದಿನಾಂಕ: 10-05-2020 ರಂದು ಸೋಮವಾರಪೇಟೆ ತಾಲ್ಲೂಕು ಕುಸುಬೂರು ಗ್ರಾಮದ ಕೆಂಚಮ್ಮನ ಬಾಣೆ ನಿವಾಸಿ ಪ್ರಕಾಶ ಎಂಬುವವರಿಗೆ ವಿಪರೀತ ಮದ್ಯಸೇವನೆ ಅಭ್ಯಾಸವಿದ್ದು ಯಾವುದೋ ವಿಚಾರದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಅಕ್ರಮ ಜೂಜಾಟ ಪ್ರಕರಣ
ದಿನಾಂಕ: 10-05-2020 ರಂದು ಸೋಮವಾರಪೇಟೆ ತಾಲ್ಲೂಕು ಬಜೆಗುಂಡಿ ಗ್ರಾಮದ ಸ್ಮಶಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ ಠಾಣೆ ಪಿಎಸ್ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಸುರೇಶ್, ಮುಸ್ತಾಫ, ಶಿವಣ್ಣ, ಕೃಷ್ಣ, ಮಂಜ, ಮಧು ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ಹೊಡೆದಾಟ ಪ್ರಕರಣ
ದಿನಾಂಕ: 10-05-2020 ರಂದು ಸುಂಟಿಕೊಪ್ಪ ಗ್ರಾಮದ ಕೆ.ಇ.ಬಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಲತೀಫ್, ಸಾಸಿರ್, ನಿಸಾರ್, ಆಯುಬ್, ಬಷೀರ್, ಫರಾಜ್, ಯತೀಶ್, ಕಾರ್ತಿಕ ಮತ್ತು ಸುನಿಲ್ ಎಂಬುವವರು ಸಾರ್ವಜನಿಕ ನೆಮ್ಮದಿಗೆ ತೊಂದರೆಯಾಗುವಂತೆ ಪರಸ್ಪರ ಜಗಳ ಮಾಡುತ್ತಾ ಕೈ ಮಿಲಾಯಿಸಿ ತಳ್ಳಾಡಿಕೊಂಡು ಹೊಡೆದಾಟ ಮಾಡಿಕೊಂಡಿದ್ದು ಈ ಬಗ್ಗೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಯುವಕ ಸಾವು
ದಿನಾಂಕ: 10-5-2020 ರಂದು ಸೋಮವಾರಪೇಟೆ ತಾಲ್ಲೂಕು ಹಟ್ಟಿಹೊಳೆ ಅಂಜಬೆಟ್ಟಗೇರಿ ಗ್ರಾಮದ ನಿವಾಸಿ ಕೃಷ್ಣ ಎಂಬುವವರು ಸ್ನೇಹಿತರೊಂದಿಗೆ ಸ್ನಾನ ಮಾಡಲು ಹಟ್ಟಿಹೊಳೆಗೆ ಹೋಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಈ ಬಗ್ಗೆ ಮೃತನ ತಾಯಿ ನೀಡಿದ ದೂರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಅಕ್ರಮ ಮರಳು ಸಾಗಾಟ ಪ್ರಕರಣ
ದಿನಾಂಕ: 10-05-2020 ರಂದು ಪೊನ್ನಂಪೇಟೆ ಠಾಣೆ ಪಿಎಸ್ಐ ಡಿ.ಕುಮಾರ್ ರವರಿಗೆ ಬಂದ ಖಚಿತ ವರ್ತಮಾನದ ಮೇರೆ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಕುಂಬಾರಕಟ್ಟೆ ಗ್ರಾಮದ ಕಡೆಯಿಂದ ಬಾಳೆಲೆ ಗ್ರಾಮಕ್ಕೆ ಕೆಎ-12-ಟಿ-2101 ರ ಟ್ರ್ಯಾಕ್ಟರ್ ನಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಿದ್ದಾರೆ.
ವ್ಯಕ್ತಿ ಆತ್ಮಹತ್ಯೆ
ದಿನಾಂಕ: 10-05-2020 ರಂದು ವಿರಾಜಪೇಟೆ ತಾಲ್ಲೂಕು ಅರಪಟ್ಟು ಗ್ರಾಮದ ನಿವಾಸಿ ನವಾಜ್ ಎಂಬುವವರು ವೈಯಕ್ತಿಕ ವಿಚಾರದಲ್ಲಿ ಮನನೊಂಡು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತರ ಸಹೋದರ ಮುನೀರ್ ಎಂಬುವವರು ನೀಡಿದ ದೂರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ವ್ಯಕ್ತಿ ಆತ್ಮಹತ್ಯೆ
ದಿನಾಂಕ: 09-05-2020 ರಂದು ಗುಹ್ಯ ಗ್ರಾಮದ ವರ್ನಾಂಡಿ ಎಸ್ಟೇಟ್ ನಿವಾಸಿ ವಿನು ಎಂಬುವವಗೆ ಅನಾರೋಗ್ಯವಿದ್ದುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತರ ತಂದೆ ನೀಡಿದ ದೂರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಹಲ್ಲೆ ಪ್ರಕರಣ
ದಿನಾಂಕ: 09-05-2020 ರಂದು ಮಡಿಕೇರಿ ತಾಲ್ಲೂಕು ಇಬ್ನಿವಳವಾಡಿ ಗ್ರಾಮದ ನೀರುಕೊಲ್ಲಿ ನಿವಾಸಿ ಚಂದ್ರ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಪೆಮ್ಮಯ್ಯ ಹಾಗೂ ಅವರ ಮಗ ವಿಶ್ವನಾಥ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಕೊಲೆ ಮಾಡುವ ಉದ್ದೇಶದಿಂದ ಕತ್ತಿಯಿಂದ ತಲೆಗೆ ಹಲ್ಲೆ ಮಾಡಿ ತಿವ್ರ ಗಾಯಗೊಳಿಸಿದ್ದು ಈ ಬಗ್ಗೆ ಚಂದ್ರ ರವರು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.