Crime News

ಅಕ್ರಮ ಮರಳು ಸಾಗಾಟ ಪ್ರಕರಣ

            ದಿನಾಂಕ:14-05-2020 ರಂದು ಗೋಣಿಕೊಪ್ಪ ಠಾಣೆ ಪಿಎಸ್ಐ ಸುರೇಶ್ ಬೋಪಣ್ಣ ರವರಿಗೆ ದೊರೆತ ಖಚಿತ ವರ್ತಮಾನದ  ಮೇರೆ ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಅರವತ್ತೊಕ್ಲು ಗ್ರಾಮದ ಬಳಿ ಕೆಎ-17-ಬಿ-9269 ರ ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರಳನ್ನು ವಶಕ್ಕೆ ಪಡೆದುಕೊಂಡು ಅರವತ್ತೊಕ್ಲು ಗ್ರಾಮದ ನಿವಾಸಿ ಜಮ್ಮಡ ಸೋಮಣ್ಣ ಮತ್ತು ಚಾಲಕ ಸಿಜು ಎಂಬುವವರು ವಿರುದ್ದ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮರಳು ಸಂಗ್ರಹಣೆ ಪ್ರಕರಣ

            ದಿನಾಂಕ:14-05-2020 ರಂದು ಪೊನ್ನಂಪೇಟೆ ಠಾಣೆ ಪಿಎಸ್ಐ ಡಿ.ಕುಮಾರ್ ರವರಿಗೆ ದೊರೆತ ಖಚಿತ ವರ್ತಮಾನದ  ಮೇರೆ ಸಿಬ್ಬಂದಿಯವರೊಂದಿಗೆ ತೆರಳಿ ಬೆಕ್ಕೆಸೊಡ್ಲೂರು ಗ್ರಾಮದ ನಿವಾಸಿ  ಸುಳ್ಳಿಮಾಡ ಭಜನ್ ದೇವಯ್ಯ ಎಂಬುವವರು ಅಕ್ರಮವಾಗಿ ಲಕ್ಷ್ಮಣತೀರ್ಥ ಹೊಳೆಯಿಂದ ಕಳ್ಳತನ ಮಾಡಿ ಅವರ ಮನೆಯ ಬಳಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಮರಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 14-05-2020 ರಂದು ವಿರಾಜಪೇಟೆ ತಾಲ್ಲೂಕು ಬಿರುನಾಣಿ ಗ್ರಾಮದ ನಿವಾಸಿ ದರ್ಶನ್ ಕುಮಾರ್ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಪ್ರೀತಮ್,ಗೌತಮ್, ರಾಬಿನ್ ಎಂಬುವವರು ದಾರಿಯ ವಿಚಾರದಲ್ಲಿ ಪರಸ್ಪರ ಜಗಳ ಮಾಡಿಕೊಂಡು ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಕತ್ತು ಹಿಸುಕಿ ಚಾಕುವಿನಿಂದ ಹಲ್ಲೆಮಾಡಿ ಪರಸ್ಪರ ಕೊಲೆ ಮಾಡಲು ಪ್ರಯತ್ನಿಸಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ಕರೆ ಮಾಡಿ ವಂಚನೆ:

            ದಿನಾಂಕ: 14-05-2020 ರಂದು ಸೋಮವಾರಪೇಟೆ ತಾಲ್ಲೂಕು ರಾಮೇನಹಳ್ಳಿ ಗ್ರಾಮದ ಧರ್ಮೇಗೌಡ ಎಂಬುವವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ ವ್ಯಕ್ತಿಯೊಬ್ಬರು ಮಾತನಾಡಿ ಬ್ಯಾಂಕ್ ನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿ ಬ್ಯಾಂಕ್ ಎಟಿಎಂ ಕಾರ್ಡ್ ರಿನೀವಲ್ ಮಾಡವುದಾಗಿ ಹೇಳಿ ಎಟಿಎಂ ಕಾರ್ಡ್ ವಿವರ ಮತ್ತು ಒಟಿಪಿ ಸಂಖ್ಯೆಯನ್ನು ಪಡೆದು ಬ್ಯಾಂಖ್ ಉಳಿತಾಯ ಖಾತೆಯಿಂದ 75,000 ರೂ ಹಣವನ್ನು ತೆಗೆದು ವಂಚನೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕೊಡಗು ಸೈಬರ್ ಅಪರಾಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 14-05-2020 ರಂದು ಸೋಮವಾರಪೇಟೆ ತಾಲ್ಲೂಕು ಬೇಕನಳ್ಳಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಬಿ-5772 ರ ಪಿಕ ಅಪ್ ವಾಹನವನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-04-ಎಂ3-0002 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರು ಚಾಲಕ ಪ್ರಸನ್ನ ಎಂಬುವವರು ಗಾಯಗೊಂಡಿದ್ದು ಪಿಕ್ ಅಪ್ ಚಾಲಕನು ವಾಹನವನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.