Crime News

ಹಲ್ಲೆ ಪ್ರಕರಣ

            ದಿನಾಂಕ: 14-05-2020 ರಂದು ಮಡಿಕೇರಿ ತಾಲ್ಲೂಕು ಕಡಗದಾಳು ಗ್ರಾಮದ ಕತ್ತಲೆಕಾಡು ಪೈಸಾರಿ ನಿವಾಸಿ ಜಿ. ಅಜಿತ್ ಎಂಬುವವರು ಅವರ ಸ್ನೇಹಿತ ಅಜಿತ್ ಎಂಬುವವರ ಆಟೋರಿಕ್ಷಾದಲ್ಲಿ ಕೆ.ನಿಡುಗಣೆ ಗ್ರಾಮಕ್ಕೆ ಬಾಡಿಗೆಗೆ ಹೋಗಿದ್ದಾಗ ವಿನು, ತೀರ್ಥೇಶ್ ಮತ್ತು ಪುನೀತ್ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿ ಹಲ್ಲೆ ಮಾಡಿ ಗಾಯಗೊಳಿಸಿ ಕೈಯಲ್ಲಿದ್ದು ಮೊಬೈಲನ್ನು ಕೆಳಗೆ ಬೀಳಿಸಿ ಹಾನಿಮಾಡಿದ್ದು ಈ ಬಗ್ಗೆ  ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 15-05-2020 ರಂದು ಸೋಮವಾರಪೇಟೆ ತಾಲ್ಲೂಕು ಒಡೆಯನಪುರ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಯು-0566 ರ ಬೈಕನ್ನು ಅದರ ಸವಾರ ಮಂಜೇಶ್ ಎಂಬುವವರು ಮುಂದೆ ಹೋಗುತ್ತಿದ್ದ ಕಾರನ್ನು ಹಿಂದಿಕ್ಕುವಾಗ ಅತಿವೇಗ ಮತ್ತು ಜಾಗರೂಕತೆಯಿಂದ ಚಾಲನೆ ಮಾಡಿ ಎದುರುಗಡೆಯಿಂದ ಬರುತ್ತಿದ್ದ ಕೆಎ-51-ಎನ್ಎ-7269 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಕಾರು ಚಾಲಕ ಅಬ್ದುಲ್ ಮಜೀದ್ ಎಂಬುವವರು ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕಛ 15-05-2020 ರಂದು ಸೋಮವಾರಪೇಟೆ ತಾಲ್ಲೂಕು ಯಲಕನೂರು ಗ್ರಾಮದ ನಿವಾಸಿ ನಾಗ ಮತ್ತು ಅವರ ಪತ್ನಿ ಲೀಲಾ ಎಂಬುವವರಿಗೆ ಪಕ್ಕದ ಮನೆಯ ನಿವಾಸಿಗಳಾದ ಪರಮೇಶ ಮತ್ತು ಭವ್ಯ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ         

    ದಿನಾಂಕ: 15-05-2020 ರಂದು ವಿರಾಜಪೇಟೆ ತಾಲ್ಲೂಕು ಈಸ್ಟ್ ನೆಮ್ಮೆಲೆ ಗ್ರಾಮದ ನಿವಾಸಿ ಶ್ರೀಮತಿ ಪ್ರೇಮಾವತಿ ಮತ್ತು ಅವರ ಮನೆಯ ಕಾರ್ಮಿಕರು ಹಾಗೂ ಟಿ.ಶೆಟ್ಟಿಗೇರಿ ಗ್ರಾಮದ ನಿವಾಸಿ ವಿಠಲ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಮಾಡಿಕೊಂಡಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಎರಡು  ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.