Crime News

ಹಲ್ಲೆ ಪ್ರಕರಣ

            ದಿನಾಂಕ: 18-05-2020 ರಂದು ಮಡಿಕೇರಿ ತಾಲ್ಲೂಕು ಮುಕ್ಕೋಡ್ಲು ಗ್ರಾಮದ ಆವಂಡಿ ನಿವಾಸಿ ಮುತ್ತವ್ವ ಎಂಬುವವರು ಅವರ ಜಾಗದಲ್ಲಿ ಕಬ್ಬಿನ ಗಿಡ ನೆಡುತ್ತಿರುವಾಗ ಮಗ ಪ್ರದೀಪ್, ಸಂಬಂದಿಕರಾದ ಪೊನ್ನಮ್ಮ ಮತ್ತು ಬೋಪಣ್ಣ ಎಂಬುವವರು ಜಗಳ ಮಾಡಿ ಕೈಯಿಂದ ಮತ್ತು ರಬ್ಬರ್ ಪೈಪಿನಿಂದ ಹಲ್ಲೆ ಮಾಡಿ ನೋವುಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ದನ ಕಳವು ಪ್ರಕರಣ

            ದಿನಾಂಕ: 20-05-2020 ರಂದು ಮಡಿಕೇರಿ ತಾಲ್ಲೂಕು ಕೊಣಂಜಗೇರಿ ಪಾರಾಣೆ ಗ್ರಾಮದ ನಿವಾಸಿ ಸಿ.ಎಂ ಲೋಕೇಶ್ ಎಂಬುವವರ ಕೊಟ್ಟಿಗೆಯಿಂದ ಒಂದು ಎತ್ತನ್ನು ಕಳವು ಮಾಡಿ ಪಿಕ ಅಪ್ ವಾಹನದಲ್ಲಿ ದನವನ್ನು ತೆಗೆದುಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವ್ಯಕ್ತಿ ಆತ್ಮಹತ್ಯೆ

            ದಿನಾಂಕ: 20-05-2020 ರಂದು ವಿರಾಜಪೇಟೆ ತಾಲ್ಲೂಕು ಬಾಳೆಲೆ ಗ್ರಾಮದ ಬೈರಮುಂಡ ನಿವಾಸಿ ಮುಸ್ತಫ ಎಂಬುವವರು ಅನಾರೋಗ್ಯವಿದ್ದುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಅಸ್ವಸ್ಥಗೊಂಡಿದ್ದವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸದರೂ ಸಹ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು ಈ ಬಗ್ಗೆ ಮೃತರ ತಾಯಿ ನೀಡಿದ ದೂರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ    

         ದಿನಾಂಕ: 20-05-2020 ರಂದು ರಾತ್ರಿ ಸೋಮವಾರಪೇಟೆ ತಾಲ್ಲೂಕು ಬಸವನಹಳ್ಳಿ ಗ್ರಾಮದ ಆನೆಕಾಡು ಬಳಿ ಹೆದ್ದಾರಿ ರಸ್ತೆಯಲ್ಲಿ ಟೈರ್ ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಕೆಎ-12-ಎಂಎ-1876 ಮತ್ತು ಕೆಎ-51-ಎಂಬಿ-2375 ರ ಕಾರುಗಳನ್ನು ಅದರ ಚಾಲಕು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಡಿಕ್ಕಿಪಡಿಸಿದ ಪರಿಣಾಮ ಕಾರಿನ ಚಾಲಕರು ಗಾಯಗೊಂಡಿದ್ದು ಈ ಬಗ್ಗೆ ಲಾರಿ ಚಾಲಕ ವೆಂಕಟೇಶ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.