Crime News

ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು.

ದಿನಾಂಕ: 07-06-2020 ರಂದು ವಿರಾಜಪೇಟೆ ತಾಲ್ಲೂಕು ಹಚ್ಚಿನಾಡು ಗ್ರಾಮದ ಬೋಪಣ್ಣ ಎಂಬುವವರ ಲೈನ್ ಮನೆಯಲ್ಲಿ ವಾಸವಿದ್ದ ಬೊಳ್ಳಿ ಎಂಬುವವರು ಮನೆಯ ಸಮೀಪದ ಕೆರೆಯಲ್ಲಿ ಸ್ನಾನ ಮಾಡುತ್ತಿರುವಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 07-06-2020 ರಂದು ಮಡಿಕೇರಿ ತಾಲ್ಲೂಕು ದೇವರಕೊಲ್ಲಿ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಆಶಿಫ್ ಎಂಬುವವರು ಕೆಎ-12-ಜೆಡ್-7526 ರ ಕಾರನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಕಾರು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಗುಚಿ ಬಿದ್ದುದರಿಂದ ಚಾಲಕ ಹಾಗೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅನಿಶ್, ಆರ್ಶಿಯ, ಶಮಜ್ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ಕಿರಣ್ ಕುಮಾರ್ ಎಂಬುವವರು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

ದಿನಾಂಕ: 07-06-2020 ರಂದು ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಸುಳುಗಳಲೆ ಕಾಲೋನಿ ಬಳಿ ಅಕ್ರಮವಾಗಿ ಇಸ್ಪೀಟ್ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಶನಿವಾರಸಂತೆ ಠಾಣೆ ಎಎಸ್ಐ ಗೋವಿಂದ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.