Crime News

ದೇವಾಲಯ ಹುಂಡಿ ಹಣ ಕಳವು ಪ್ರಕರಣ:
ವಿರಾಜಪೇಟೆ ತಾಲ್ಲೂಕು ವೆಸ್ಟ್ ನೆಮ್ಮೆಲೆ ಗ್ರಾಮದ ಶ್ರೀ ವನದುರ್ಗಿ ದೇವರ ಹುಂಡಿಯ ಬೀಗವನ್ನು ಯಾರೋ ಕಳ್ಳರು ಮುರಿದು ಅದರಲ್ಲಿದ್ದ ಅಂದಾಜು 1,000 ರೂ ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದೇವಾಲಯ ಸಮಿತಿ ಅಧ್ಯಕ್ಷರು ದಿನಾಂಕ: 16-06-2020 ರಂದು ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ರಸ್ತೆ ಅಪಘಾತ ಪ್ರಕರಣ:
ದಿನಾಂಕ: 16-06-2020 ರಂದು ವಿರಾಜಪೇಟೆ ತಾಲ್ಲೂಕು ತೂಚಮಕೇರಿ ಗ್ರಾಮದ ಬಳಿ ಕೆಎ-06-ಎಲ್-8464 ರ ಬೈಕನ್ನು ಅದರ ಸವಾರ ಸೋಮಯ್ಯ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಕೆಎ-45-ಡಬ್ಲ್ಯೂ-30 ರ ಬೈಕ್ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ಸವಾರರು ಹಾಗೂ ಹಿಂಬದಿ ಸವಾರರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಉದಯ ಎಂಬುವವರು ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ವ್ಯಕ್ತಿ ಆತ್ಮಹತ್ಯೆ:
ದಿನಾಂಕ: 15-06-2020 ರಂದು ಸೋಮವಾರಪೇಟೆ ತಾಲ್ಲೂಕು ಕಂಬಿಬಾಣೆ ಗ್ರಾಮದ ನಿವಾಸಿ ಹರೀಶ್ ಎಂಬುವವರು ವೈಯಕ್ತಿಕ ವಿಚಾರದಲ್ಲಿ ಜೀಔನದಲ್ಲಿ ಜಿಗುಪ್ಸೆಗೊಂಡು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತರ ತಾಯಿ ನೀಡಿದ ದೂರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.