Crime News

ಜೀಪ್ ಗೆ ಸ್ಕೂಟರ್ ಡಿಕ್ಕಿ, ಸವಾರನಿಗೆ ಗಾಯ.

ದಿನಾಂಕ: 18-06-2020 ರಂದು ಮಡಿಕೇರಿ ತಾಲ್ಲೂಕು ಚೇರಂಬಾಣೆ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಕ್ಯೂ-2730 ರ ಸ್ಕೂಟರನ್ನು ಅದರ ಸವಾತ ಮೋಕ್ಷಿತ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಎಂ-9062 ರ ಜೀಪಿಗೆ ಡಿಕ್ಕಿಪಡಿಸಿದ ಪರಿಣಾಮ ಸ್ಕೂಟರ್ ಸವಾರ ಕೆಳಗೆ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ವಸಂತ್ ಎಂಬುವವರು ನೀಡಿದ ಪುಕಾರಿನ ಮೇರೆ ಭಾಗಮಂಡಲ ಠಾಣೆ ಪೊಲೀಸರು ಪ್ರರಕಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬೈಕ್ ಗೆ ಕಾರು ಡಿಕ್ಕಿ, ಸವಾರನಿಗೆ ಗಾಯ.

ದಿನಾಂಕ: 19-06-2020 ರಂದು ವಿರಾಜಪೇಟೆ ತಾಲ್ಲೂಕು ಅಮ್ಮತ್ತಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆ-12-ಎನ್-5604 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-13-ಡಬ್ಲ್ಯೂ-3919 ರ ಬೈಕ್ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ಸವಾಋ ಮಂಜು ಎಂಬುವವರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಶಿವಕುಮಾರ್ ಎಂಬುವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ: 19-06-2020 ರಂದು ವಿರಾಜಪೇಟೆ ತಾಲ್ಲೂಕು ಶ್ರೀಮಂಗಲ ಗ್ರಾಮದ ನಿವಾಸಿ ಪೂಣಚ್ಚ ಎಂಬುವವರು ಗುರು ಹಾರ್ಡ್ ವೇರ್ಸ್ ಬಳಿ ಇರುವಾಗ ಐಪುಮಾಡ ಸಂಜು ಎಂಬುವವರು ಕೊಡಬೇಕಾಗಿದ್ದ ಸಾಲದ ಹಣವನ್ನು ಕೇಳಿದಾಗ ಕೊಲೆ ಮಾಡುವ ಉದ್ದೇಶದಿಂದ ಏಕಾಏಕಿ ಹಾರ್ಡ್ ವೇರ್ ಶಾಪ್ ನಲ್ಲಿದ್ದ ದೆಬ್ಬೆಕತ್ತಿಯಿಂದ ತಲೆಗೆ ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.