Crime News

ಹಲ್ಲೆ ಪ್ರಕರಣ

ದಿನಾಂಖ: 21-06-2020 ರಂದು ಮಡಿಕೇರಿ ತಾಲ್ಲೂಕು ಹೊದ್ದೂರು ಗ್ರಾಮದ ಕಣಬಲಮುರಿ ಗ್ರಾಮದ ನಿವಾಸಿ ಕುಂಞ ಅಬ್ದುಲ್ಲ ಎಂಬುವವರಿಗೆ ಪಾಲೆಮಾಡು ಗ್ರಾಮದ ನಿವಾಸಿಗಳಾದ ರಫೀಕ್, ಸಿದ್ದಿಕ್, ಸಿಯಾಬ್ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿ ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವ್ಯಕ್ತಿ ಕಾಣೆ ಪ್ರಕರಣ

ದಿನಾಂಕ: 20-06-2020 ರಂದು ವಿರಾಜಪೇಟೆ ತಾಲ್ಲೂಕು ಬೈರಂಬಾಡ ಗ್ರಾಮದ ನಿವಾಸಿ ಸುರೇಶ್ ಎಂಬುವವರು ಮನೆಯಿಂದ ಲ್ಲಿಗೋ ಹೊರಟು ಹೋದವರು ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿದ್ದು ಈ ಬಗ್ಗೆ ಮುತ್ತಪ್ಪ ಎಂಬುವವರು ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ: 20-06-2020 ರಂದು ಮಡಿಕೇರಿ ತಾಲ್ಲೂಕು ಕೋಪಟ್ಟಿ ಗ್ರಾಮದ ನಿವಾಸಿ ದಿನೇಶ್ ಎಂಬುವವರು ಅವರ ಪತ್ನಿಯ ಮನೆ ನಾಪೋಕ್ಲು ಗ್ರಾಮಕ್ಕೆ ಬಂದು ವಾಪಾಸ್ಸು ಕೋಪಟ್ಟಿಗೆ ಹೋಗುತ್ತಿರುವುವಾಗ ಕೊಟ್ಟೂರು ಗ್ರಾಮದ ನಿವಾಸಿ ಯತೀಶ್ ಎಂಬುವವರು ಕರನ್ನ ಹಿಂಬಾಲಿಸಿಕೊಂಡು ಹೋಗಿ ತಡೆದು ನಿಲ್ಲಿಸಿ, ವಾಹನ ಡ್ರೈವಿಂಗ್ ಸ್ಕೂಲ್ ವಿಚಾರದಲ್ಲಿ ಜಗಳ ಮಾಡಿ ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿ ನೋವುಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಆತ್ಮಹತ್ಯೆಗೆ ಪ್ರಚೋದನೆ, ಪ್ರಕರಣ ದಾಖಲು.

ದಿನಾಂಕ: 20-06-2020 ರಂದು ವಿರಾಜಪೇಟೆ ತಾಲ್ಲೂಕು ಚೆಂಬೆಬೆಳ್ಳೂರು ಗ್ರಾಮದ ನಿವಾಸಿ ಅಶೋಕ ದೇವಯ್ಯ ಎಂಬುವವರು ಅವರ ಮನೆಯ ಬಳಿ ಇರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವಿಗೆ ಮಂಡೇಪಂಡ ರಾಜೇಶ್ ಅಯ್ಯಪ್ಪ ಮತ್ತು ಬಲ್ಲಮಂಡ ಅನೂಪ್ ಎಂಬುವವರು ಕಾರಣರಾಗಿರುವುದಾಗಿ ಒಂದು ಪತ್ರ ಬರೆದು ಕರೆಯ ದಡದಲ್ಲಿ ಇಟ್ಟಿದ್ದು ಈ ಬಗ್ಗೆ ಮೃತರ ತಾಯಿ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 21-06-2020 ರಂದು ಸೋಮವಾರಪೇಟೆ ತಾಲ್ಲೂಕು ಕೂಗೇಕೋಡಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-41-ಎಂ-4646 ರ ಬೊಲೆರೋ ವಾಹನವನ್ನು ಅದರ ಚಾಲಕ ಪ್ರಕಾಶ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಚಂದ್ರಶೇಖರ್ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ: 21-06-2020 ರಂದು ಸೋಮವಾರಪೇಟೆ ತಾಲ್ಲೂಕು ಹಾನಗಲ್ಲು ಗ್ರಾಮದ ನಿವಾಸಿ ವೀರೇಶ @ ಅಪ್ದಣ್ಣಿ ಎಂಬುವವರು ಅವರ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರು ಮದ್ಯಸೇವನೆ ಮಾಡಲು ಅವಕಾಶ ಮಾಡಿಕೊಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ ಠಾಣೆ ಪಿಎಸ್ಐ ವಿರೂಪಾಕ್ಷ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ವೀರೇಶ ರವರ ವಿರುದ್ದ ನೀಡಿದ ವರದಿಯ ಮೇರೆ ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಕ್ಷುಲ್ಲಕ ಕಾರಣಕ್ಕೆ ಬ್ಯಾಂಕ್ ನೌಕರನ ಮೇಲೆ ಹಲ್ಲೆ.

ದಿನಾಂಕ: 20-06-2020 ರಂದು ಸೋಮವಾರಪೇಟೆ ತಾಲ್ಲೂಕು ಗೌಡಳ್ಳಿ ವಿ.ಎಸ್.ಎಸ್.ಎನ್ ಬ್ಯಾಂಕಿಗೆ ರಘು. ಹರೀಶ, ಲೋಹಿತ, ಸುರೇಶ ಮತ್ತು ಪ್ರಜ್ವಲ್ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಬ್ಯಾಂಕಿನಲ್ಲಿ ಅಟೆಂಡರ್ ಕೆಲಸ ಮಾಡಿಕೊಂಡಿರುವ ವಿನಯ್ ಎಂಬುವವರಿಗೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವ್ಯಕ್ತಿ ಆತ್ಮಹತ್ಯೆ

ದಿನಾಂಕ: 20-06-2020 ರಂದು ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಹುಲುಸೆ ಗ್ರಾಮದ ನಿವಾಸಿ ಕುಮಾರಸ್ವಾಮಿ ಎಂಬುವವರು ಯಾವುದೋ ವಿಚಾರದಲ್ಲಿ ಬೇಸರ ಮಾಡಿಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಅಸ್ವಸ್ಥಗೊಂಡಿದ್ದವರನ್ನು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗ ಮೃತಪಟ್ಟಿದ್ದು ಈ ಬಗ್ಗೆ ಮೃತರ ಮಗ ನೀಡಿದ ದೂರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕಛ 18-06-2020 ರಂದು ಸೋಮವಾರಪೇಟೆ ತಾಲ್ಲೂಕು ಗೌಡಳ್ಳಿ ಗ್ರಾಮದ ನಿವಾಸಿ ರಘುವೀರ್ ನಾಯ್ಡು ಎಂಬುವವರಿಗೆ ಗೌಡಳ್ಳಿ ಗ್ರಾಮದ ನಿವಾಸಿ ದಿವಾಕರ, ಕೂಗೂರು ಗ್ರಾಮದ ನಿವಾಸಿಗಳಾದ ರವಿ ಮತ್ತು ವಿನಯ್ ಎಂಬುವವರು ಗ್ರಾಮದ ದೇವಾಲಯದ ಬಳಿ ಕಟ್ಟಡ ನಿರ್ಮಾಣದ ವಿಚಾರದಲ್ಲಿ ಜಗಳ ಮಾಡಿ ಅವಾಚ್ಯ ಪದಗಳಿಂದ ಬೈದು ಕೊಲಡ ಬೆದರಿಕೆ ಹಾಕಿದ್ದು ಈ ಬಗ್ಗೆ ದಿನಾಂಕ: 21-06-2020 ರಂದು ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.