Crime News

ರಸ್ತೆ ಅಪಘಾತ ಪ್ರಕರಣ

ದಿನಾಂಕ: 22-06-2020 ರಂದು ವಿರಾಜಪೇಟೆ ತಾಲ್ಲೂಕು ಗೋಣಿಕೊಪ್ಪ-ಪೊನ್ನಂಪೇಟೆ ಮುಖ್ಯ ರಸ್ತೆಯಲ್ಲಿ ಕೆಎ-12-ಎಂ-ಎಂ-6692 ರ ಕಾರನ್ನು ಅದರ ಚಾಲಕ ಶ್ಯಾಂ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-04 –ಇವೈ-9530 ರ ಸ್ಕೂಟರ್ ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರ ಸಪುತ್ ಲಾಲ್ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ: 22-06-2020 ರಂದು ವಿರಾಜಪೇಟೆ ಪಟ್ಟಣದ ಪಂಜರಪೇಟೆ ನಿವಾಸಿ ಯೂಸುಫ್ ಎಂಬುವವರಿಗೆ ಅವರ ಲೈನ್ ಮನೆಯಲ್ಲಿ ವಾಸಮಾಡಿಕೊಂಡು ತೋಟದ ಕೆಲಸ ಮಾಡಿಕೊಂಡಿದ್ದ ರಾಮಚಂದ್ರ ಎಂಬುವವರು ಕ್ಷುಲ್ಲಕ ಕಾರಣಕ್ಕೆ ದಾರಿ ತಡೆದು ಹಲ್ಲೆ ಮಾಡಿ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.