Crime News

ಹಲ್ಲೆ ಪ್ರಕರಣ

ದಿನಾಂಕ: 03-07-2020 ರಂದು ವಿರಾಜಪೇಟೆ ತಾಲ್ಲೂಕು ಬಾಳೆಲೆ ಗ್ರಾಮದ ನಿವಾಸಿ ಕುಶಾಲಪ್ಪ ಎಂಬುವವರು ವಿರಾಜಪೇಟೆ ಪಟ್ಟಣದ ಬಸ್ ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿರುವಾಗ ಕಲ್ಲುಬಾಣೆ ನಿವಾಸಿ ಸಾಜಿ ಎಂಬುವವರು ವೈಯಕ್ತಿಕ ವಿಚಾರದಲ್ಲಿ ವೈಷಮ್ಯದಿಂದ ದಾರಿ ತಡೆದು ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಆಟೋರಿಕ್ಷಾ ಡಿಕ್ಕಿ ಬೈಕ್ ಸವಾರರಿಗೆ ಗಾಯ.

ದಿನಾಂಕ: 02-07-2020 ರಂದು ವಿರಾಜಪೇಟೆ ತಾಲ್ಲೂಕು ಆರ್ಜಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಎ-3170 ರ ಆಟೋರಿಕ್ಷಾ ಚಾಲಕ ಅನಿಲ್ ಎಂಬುವವನು ಮುಂದೆ ಹೋಗುತ್ತಿದ್ದ ವಾಹನವನ್ನು ಹಿಂದಿಕ್ಕುವಾಗ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಎದುರುಗಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಬಿದ್ದು ಗಾಯಗೊಂಡಿರುತ್ತಾರೆ. ಡಿಕ್ಕಿಪಡಿಸಿದ ನಂತರ ವಾಹನವನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿಗೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.