Crime News

ಬೈಕ್ ಕಳವು ಪ್ರಕರಣ

            ದಿನಾಂಕ: 03-07-2020 ರಂದು ವಿರಾಜಪೇಟೆ ಪಟ್ಟಣದ ಗಾಂಧಿನಗರ ನಿವಾಸಿ ಸ್ಟೀಫನ್ ಡಿಸೋಜ ಎಂಬುವವರು ವಿರಾಜಪೇಟೆ ನ್ಯಾಯಾಲಯದ ಮುಂದಿನ ರಸ್ತೆಯಲ್ಲಿ ನಿಲ್ಲಿಸಿದ್ದ ಕೆಎ-12-ಕೆ-7755 ರ ಹೀರೋ ಹೋಂಡಾ ಸ್ಪ್ಲೆಂಡರ್ ಬೈಕನ್ನು ಯಾರೋ ಕಳ್ಳರು ಕಳುವ ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ    

ದಿನಾಂಕ: 03-07-2020 ರಂದು ವಿರಾಜಪೇಟೆ ತಾಲ್ಲೂಕು ಬೆಮ್ಮತ್ತಿ ಧನುಗಾಲ ನಿವಾಸಿ ಶ್ರೀಮತಿ ಸಾರಾ ಮತ್ತು ಅವರ ಮನೆಯವರು ಕಾರಿನಲ್ಲಿ ಹೋಗುತ್ತಿರುವಾಗ ಅದೇ ಗ್ರಾಮದ ನಿವಾಸಿ ಮಹಮ್ಮದ್ ಎಂಬುವವರು ಕಾರನ್ನು ಅಡ್ಡಗಟ್ಟಿ ಹಳೆ ವೈಷಮ್ಯದಿಂದ ಅವಾಚ್ಯ ಪದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಸಾಗಾಟ ಪ್ರಕರಣ

ದಿನಾಂಕ: 04-07-2020 ರಂದು ವಿರಾಜಪೇಟೆ ತಾಲ್ಲೂಕು ಕೆ. ಬಾಡಗ ಗ್ರಾಮದ ಕೇಂಬು ಕೊಲ್ಲಿ ಬಳಿ ಕೆಎ-12-ಬಿ-8154 ರ ಆಟೋರಿಕ್ಷಾದಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ಮಾರಾಟ ಮಾಡಲು ಮದ್ಯ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕುಟ್ಟ ಠಾಣೆ ಪಿಎಸ್ಐ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪೆರಿಯಸ್ವಾಮಿ ಎಂಬುವವರ ವಿರುದ್ದ ಪ್ರರಕಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ: 04-07-2020 ರಂದು ಮಡಿಕೇರಿ ತಾಲ್ಲೂಕು ಬಾವಲಿ ಗ್ರಾಮದ ನಿವಾಸಿ ಮುಕ್ಕಾಟಿರ ಗಣಪತಿ ಎಂಬುವವರು ಅವರ ಅಂಗಡಿಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಿ ಮದ್ಯ ಸೇವನೆ ಮಾಡಲ; ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ನಾಪೋಕ್ಲು ಠಾಣೆ ಪಿಎಸ್ಐ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಎಟಿಎಂ ಕಾರ್ಡ್ ನಂಬರ್ ಪಡೆದು ವಂಚನೆ

ದಿನಾಂಕ: 30-06-2020 ರಂದು ಶಫಿಕಮಲ್ ಎಂಬುವವರ ಮೊಬೈಲ್ ನಂಬರ್ ಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಸರ್ಕಾರದಿಂದ ಕರೆ ಮಾಡುತ್ತಿದ್ದು ಕೊರೋನ ಸಂಬಂದ ಸರ್ಕಾರದಿಂದ ಹಣ ಸಹಾಯ ಮಾಡುತ್ತಿರುವುದಾಗಿ ತಿಳಿಸಿ ಡೆಬಿಟ್ ಕಾರ್ಡ್ ನ ಮಾಹಿತಿ ತಿಳಿದುಕೊಂಡಿರುತ್ತಾನೆ. ನಂತರ ಮೊಬೈಲ್ ಗೆ ಬಂದ ಒಟಿಪಿ ಸಂಖ್ಯೆಯನ್ನು ಪಡೆದುಕೊಂಡು ಹಂತ ಹಂತವಾಗಿ ಬ್ಯಾಂಕ್ ಖಾತೆಯಿಂದ 23,382 ರೂ ಹಣವನ್ನು ವರ್ಗಾವಣೆ ಮಾಡಿಕೊಂಡು ವಂಚನೆ ಮಾಡಿದ್ದು ಈ ಬಗ್ಗೆ ದಿನಾಂಕ: 04-07-2020 ರಂದು ನೀಡಿದ ಪುಕಾರಿನ ಮೇರೆ ಕೊಡಗು ಸೈಬರ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಣದ ಆಮಿಶ ತೋರಿಸಿ ಕರೆ ಮಾಡುವ ವ್ಯಕ್ತಿಗಳು ಬ್ಯಾಂಕ್ ಅಕೌಂಟ್ ನಂಬರ್, ಎ.ಟಿ.ಎಂ ನಂಬರ್, ಸಿವಿವಿ ನಂಬರ್, ಒ.ಟಿ.ಪಿ, ಎಟಿಎಂ ಪಿನ್ ನಂಬರ್, ಪಡೆದು ವಂಚನೆ ಮಾಡುತ್ತಿದ್ದು ಇಂತಹ ಗೌಪ್ಯ ಸಂಖ್ಯೆಗಳನ್ನು ಯಾರಿಗೂ ನೀಡದಂತೆ ಸೂಚಸಲಾಗಿದೆ.