Crime News

ಅಕ್ರಮ ಜೂಜಾಟ ಪ್ರಕರಣ

ದಿನಾಂಕ: 13-07-2020 ರಂದು ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಹುಲುಸೆ ಗ್ರಾಮದ ಅಶೋಕ್ ಎಂಬುವವರ ಮನೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಶನಿವಾರಸಂತೆ ಠಾಣೆ ಪಿ.ಎಸ್.ಐ ದೇವರಾಜ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

ದಿನಾಂಕ: 13-07-2020 ರಂದು ಸೋಮವಾರಪೇಟೆ ತಾಲ್ಲೂಕು ಸಬ್ಬನಕೊಪ್ಪ ಗ್ರಾಮದ ಸಂಘದ ಕಟ್ಟಡದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ ಠಾಣೆ ಪಿ.ಎಸ್.ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ವಂಚನೆ ಪ್ರಕರಣ

ಮಡಿಕೇರಿ ನಗರದ ಮಹದೇಪೇಟೆ ನಿವಾಸಿ ಮಹಿಳೆಯೊಬ್ಬರು M4 Marry.com ಎಂಬ ವೆಬ್ ಸೈಟ್ ನಲ್ಲಿ ನೊಂದಾಯಿಸಿಕೊಂಡಿದ್ದು ಅದರಲ್ಲಿ ಹುಸೈನ್ ಶೇಖ್ ಯು.ಎಸ್.ಎ ಎಂಬ ವ್ಯಕ್ತಿಯ ಪರಿಚಯವಾಗಿ ಮದುವೆಯಾಗುವ ಪ್ರಸ್ತಾಪ ಮಾಡಿ ಮದುವೆಗೆ 50 ಸಾವಿರ ಡಾಲರ್ ಹಣ ಮತ್ತು ಚಿನ್ನಾಭರಣಗಳನ್ನು ಉಡುಗೊರೆ ಕಳುಹಿಸುವುದಾಗಿ ತಿಳಿಸಿರುತ್ತಾನೆ. ಉಡುಗೊರೆ ಪಡೆಯಲು ಸರ್ವಿಸ್ ಚಾರ್ಜ್ ಹಣವನ್ನು ಕಟ್ಟಬೇಕೆಂದು ಹೇಳಿ ಆತನು ವಿವಿಧ ಬ್ಯಾಂಕ್ ಖಾತೆಗಳ ನಂಬರ್ ಗಳನ್ನು ನೀಡಿರುತ್ತಾನೆ. ಆತನು ನೀಡಿದ ಬ್ಯಾಂಕ್ ಖಾತೆಗಳಿಗೆ 3,22,580 ರೂ ಹಣವನ್ನು ಸಂದಾಯ ಮಾಡಿರುತ್ತಾರೆ. ನಂತರ ಯಾವುದೇ ಉಡುಗೊರೆ ನೀಡದೇ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ್ದು ಈ ಬಗ್ಗೆ ದಿನಾಂಕ: 13-07-2020 ರಂದು ನೀಡಿದ ಪುಕಾರಿನ ಮೇರೆ ಕೊಡಗು ಸೈಬರ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.