Crime News

ಅಕ್ರಮ ಮರಳು ಸಾಗಾಟ ಪ್ರಕರಣ

ದಿನಾಂಕ: 14-07-2020 ರಂದು ವಿರಾಜಪೇಟೆ ತಾಲ್ಲೂಕು 1ನೇ ಪೆರುಂಬಾಡಿಯ ಬಳಿ ಸರ್ಕಾರಿ ಜಾಗದ ಬಳಿ ಇರುವ ತೋಡಿನಿಂದ ಅಕ್ರಮವಾಗಿ ಮರಳನ್ನು ತೆಗೆದು ಸಾಗಾಟ ಮಾಡಲು ಕೆಎ-12-ಬಿ-3237 ರ ವಾಹನಕ್ಕೆ ತುಂಬಿಸುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಪಟ್ಟಣ ಠಾಣೆ ಪಿ.ಎಸ್‍.ಐ ಬೋಜಪ್ಪ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಇಸ್ಮಾಯಿಲ್‍ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಮೇಲೆ ಹಲ್ಲೆ

ದಿನಾಂಕ: 14-07-2020 ರಂದು ವಿರಾಜಪೇಟೆ ತಾಲ್ಲೂಕು ದೇವಮಚ್ಚಿ ಗ್ರಾಮದ ಹಕ್ಕಿಮಾಳ ಗ್ರಾಮದ ನಿವಾಸಿ ಪುಟ್ಟಸ್ವಾಮಿ ಎಂಬುವವರು ಮನೆಗೆ ಹೋಗುತ್ತಿರುವಾಗ ಮಣಿ ಎಂಬುವವರು ಕ್ಷುಲ್ಲಕ ಕಾರಣಕ್ಕೆ ದಾರಿ ತಡೆದು ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇಋಎ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

ದಿನಾಂಕ: 14-07-2020 ರಂದು ಸೋಮವಾರಪೇಟೆ ತಾಲ್ಲೂಕು ಶನಿವಾರಸಂತೆ ಹೊಸಗುತ್ತಿ ಗ್ರಾಮದ ವಿಜಯ್‍ ಎಂಬುವವರ ಕಾಫಿ ತೋಟದಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಶನಿವಾರಸಂತೆ ಠಾಣೆ ಪಿ.ಎಸ್.ಐ ದೇವರಾಜ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಎಮಟು ಜನರ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.