Crime News

ಅಕ್ರಮ ಜೂಜಾಟ ಪ್ರಕರಣ

ದಿನಾಂಕ: 15-07-2020 ರಂದು ಮಡಿಕೇರಿ ತಾಲ್ಲೂಕು ಕುಂದಚೇರಿ ಗ್ರಾಮದ ಕೆದಂಬಾಡಿ ಕುಟುಂಬಸ್ಥರಿಗೆ ಸೇರಿದ ಬಾಣೆಯಲ್ಲಿ ಅಕ್ರಮವಾಗಿ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಭಾಗಮಂಡಲ ಠಾಣೆ ಪಿ.ಎಸ್.ಐ ಹೆಚ್‍ ಕೆ ಮಹದೇವ್‍ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಆಕಸ್ಮಿಕ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು

ದಿನಾಂಕ: 15-07-2020 ರಂದು ವಿರಾಜಪೇಟೆ ತಾಲ್ಲೂಕು ಕೋತೂರು ಗ್ರಾಮದ ನಿವಾಸಿ ಮರಿಶೆಟ್ಟಿ ಎಂಬುವವರು ಮೀನು ಹಿಡಿಯಲು ಬೀಡಿ ಎಸ್ಟೇಟ್‍ ಕೆರೆಗೆ ಹೋಗಿರುವಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಈ ಬಗ್ಗೆ ಮೃತರ ತಾಯಿ ನೀಡಿದ ಪುಕಾರಿನ ಮೇರೆ ಕುಟ್ಟ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 13-07-2020 ರಂದು ಸೋಮವಾರಪೇಟೆ ತಾಲ್ಲೂಕು ಹೊಸಗುತ್ತಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಬಿ-6143 ರ ಪಿಕ್‍ ಅಪ್‍ ವಾಹನವನ್ನು ಅದರ ಚಾಲಕ ವೆಂಕಟೇಶ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಬೈಕ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‍ ಸವಾರ ಯೋಗೇಶ್‍ ಎಂಬುವವರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನಟೇಶ್‍ ಎಂಬುವವರು ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ: 14-07-2020 ರಂದು ಸೋಮವಾರಪೇಟೆ ತಾಲ್ಲೂಕು ತಾಕೇರಿ ಗ್ರಾಮದ ನಿವಾಸಿ ಉತ್ತಪ್ಪ ಎಂಬುವವರ ಮನೆಗೆ ಅವರ ಸಹೋದರನ ಮಗ ರಕ್ಷಿತ್‍ ಎಂಬುವವರು ಮನೆಗೆ ಅಕ್ರಮ ಪ್ರವೇಶ ಮಾಡಿ ಕ್ಷುಲ್ಲಕ ಕಾರಣಕ್ಕೆ ಉತ್ತಪ್ಪ ರವರ ಪತ್ನಿಯವರಿಗೆ ದೊಣ್ಣೆಯಿಂದ ಹಲ್ಲೆ ಮಾಡಿ ನೋವುಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.