Crime News
ಹ ಲ್ಲೆ ಪ್ರಕರಣ
ದಿನಾಂಕ: 16-07-2020 ರಂದು ಸೋಮವಾರಪೇಟೆ ತಾಲ್ಲೂಕು ಹುದಗೂರು ಗ್ರಾಮದ ಸೀತಾ ಕಾಲೋನಿ ನಿವಾಸಿ ರಕ್ಷಿತ್ ಎಂಬುವವರಿಗೆ ಪಕ್ಕದ ಮನೆಯ ವಾಸಿ ಜೀವನ್ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಮನೆಯ ಒಳಗೆ ನುಗ್ಗಿ ಕತ್ತಿಯಿಂದ ಹಲ್ಲೆ ಮಾಡಿ ಗಂಭೀರ ಸ್ವರೂಪದ ಗಾಯಗೊಳಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ವಾಹನ ಡಿಕ್ಕಿ, ವ್ಯಕ್ತಿ ಸಾವು.
ದಿನಾಂಕ: 16-07-2020 ರಂದು ವಿರಾಜಪೇಟೆ ತಾಲ್ಲೂಕು ತಿತಿಮತಿ ಹುಣಸೂರು ಮುಖ್ಯ ರಸ್ತೆಯ ಸಿಂಗನ್ನೂರು ಶಿಬಿರದ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ತಿಮ್ಮ ಎಂಬುವವರಿಗೆ ಹುಣಸೂರು ಕಡೆಗೆ ಹೋಗುತ್ತಿದ್ದ ಯಾವುದೋ ವಾಹನವನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ಡಿಕ್ಕಿಪಡಿಸಿದ ಪರಿಣಾಂ ತೀವ್ರವಾಗಿ ಗಾಯಗೊಂಡು ಮೃತಪಟ್ಟಿರುತ್ತಾರೆ. ಡಿಕ್ಕಿಪಡಿಸಿದ ನಂತರ ಚಾಲಕ ವಾಹನವನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ಮಂಜು ಎಂಬುವವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಹಲ್ಲೆ ಪ್ರಕರಣ
ದಿನಾಂಕ: 16-07-2020 ರಂದು ಮಡಿಕೇರಿ ತಾಲ್ಲೂಕು ಚೆಟ್ಟಿಮಾನಿ ಗ್ರಾಮದ ನಿವಾಸಿ ಹರೀಶ್ ಕುಮಾರ್ ಎಂಬುವವರಿಗೆ ರಕ್ಷಿತ್, ರಂಜನ್ ಮತ್ತು ಪೂರ್ಣೇಶ್ ಎಂಬುವವರು ಕೆಎ-09—ಎಂ-9305 ರ ಕಾರಿನಲ್ಲಿ ಹೋಗಿ ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಭಾಗಮಂಡಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.