Crime News

ಮನುಷ್ಯ ಕಾಣೆ ಪ್ರಕರಣ

ಮಡಿಕೇರಿ ನಗರದ ಚಾಮುಂಡೇಶ್ವರಿ ನಗರದ ನಿವಾಸಿ ಎಂ.ಎನ್. ಕುಮಾರ್ ಎಂಬವರು ದಿನಾಂಕ 05/07/2020ರಂದು ಮನೆಯಿಂದ ಯಾರಿಗೂ ಹೇಳದೆ ಎಲ್ಲಿಗೋ ಹೋಗಿದ್ದು ಇದುವರೆಗೂ ಮರಳಿ ಬಂದಿರುವುದಿಲ್ಲ ಎಂಬುದಾಗಿ ನೀಡಿದ ದೂರಿನ ಮೇರೆಗೆ ಮಡಿಕೇರಿ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

ದಿನಾಂಕ 17/07/2020 ರಂದು ನಂದಿಗುಂದ ಗ್ರಾಮದ ನಿವಾಸಿ ರಾಜಣ್ಣ ಎಂಬವರ ಕಾಫಿ ತೋಟದಲ್ಲಿ ಕೆಲವರು ಅಕ್ರಮವಾಗಿ ಜೂಜಾಡುತ್ತಿರುವುದಾಗಿ ದೊರೆತ ಸುಳಿವಿನ ಮೇರೆಗೆ ಶನಿವಾರಸಂತೆ ಠಾಣೆಯ ಪಿಎಸ್‌ಐ ಹೆಚ್‌.ಇ.ದೇವರಾಜುರವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಧಾಳಿ ನಡೆಸಿ ಅಕ್ರಮವಾಗಿ ಹಣವನ್ನು ಪಣಕ್ಕಿಟ್ಟು ಜೂಜಾಡುತ್ತಿದ್ದ ಮೋಹನ್, ಬದ್ರು, ಎನ್‌.ಜೆ.ಲೋಕೇಶ್, ಯತೀಶ್ ಜಿ.ಎನ್., ವಸಂತ್ ಎನ್‌.ಡಿ. ಎಂಬವರುಗಳನ್ನು ಬಂಧಿಸಿ ಜೂಜಾಡಲು ಉಪಯೋಗಿಸಿದ್ದ ಇಸ್ಪೀಟು ಎಲೆಗಳು ಹಾಗೂ ಸುಮಾರು ರೂ.2,100/- ನಗದನ್ನು ವಶಪಡಿಸಿಕೊಂಡು ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.