Crime News

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ: 18-07-2020 ರಂದು ಸೋಮವಾರಪೇಟೆ ತಾಲ್ಲೂಕು ಚೇರಳ ಶ್ರೀಮಂಗಲ ಗ್ರಾಮದ ನಿವಾಸಿ ರೆಮಾಂಡ್‍ ಮತ್ತು ವಿಶ್ವನಾಥ ಎಂಬುವವರು ಮನೆಯಲ್ಲಿ ಅಕ್ರಮವಾಗಿ 44 ಸಾವಿರ ರೂ ಮೌಲ್ಯದ  104 ಲೀ ಮದ್ಯವನ್ನು ಶೇಖರಿಸಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಮಡಿಕೇರಿ ಗ್ರಾಮಾಂತರ ಠಾಣೆ ಅಪರಾಧ ವಿಭಾಗದ ಪಿ.ಎಸ್.ಐ ಎಂ.ಕೆ ಸದಾಶಿವ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಆರೋಪಿಗಳು ಹಾಗು ಸ್ವತ್ತುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಆಕಸ್ಮಿಕ ಸಾವು ಪ್ರಕರಣ

ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ದಿನಾಂಕ: 18-07-2020 ರಂದು ಸೋಮವಾರಪೇಟೆ ತಾಲ್ಲೂಕು ಗೋಣಿಮರೂರು ಯಡುಂಡೆ ಗ್ರಾಮದ ನಿವಾಸಿ ಸಂತೋಷ್‍ ಎಂಬುವವರು ಕಾಫಿ ತೋಟದಲ್ಲಿ ಗೊಬ್ಬರ ಹಾಕುತ್ತಿರುವಾಗ ಮರದ ಕೊಂಬೆ ಮುರಿದು ಮೈಮೇಲೆ ಬಿದ್ದ ಪರಿಣಾಮ ತೀವ್ರ ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದು ಈ ಬಗ್ಗೆ ಈರಪ್ಪ ಎಂಬುವವರು ನೀಡಿದ ದೂರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.