Crime News

ಹಲ್ಲೆ ಪ್ರಕರಣ

ದಿನಾಂಕ: 20-07-2020 ರಂದು ಸಂಜೆ ಸೋಮವಾರಪೇಟೆ ತಾಲ್ಲೂಕು ದೊಡ್ಡತೋಳೂರು ಗ್ರಾಮದ ನಿವಾಸಿ ಶಿವರಾಜು ಎಂಬುವವರ ಮನೆಯ ಬಳಿ ಅದೇ ಗ್ರಾಮದ ನಿವಾಸಿಗಳಾದ ಪುನೀತ್‍ ಮತ್ತು ಸೋಮಯ್ಯ ಎಂಬುವವರು ಪಾರ್ಟಿ ಮಾಡುತ್ತಿದ್ದುದನ್ನು ಕೇಳಿದಾಗ ಹಳೆ ವೈಷಮ್ಯದಿಂದ ಜಗಳ ಮಾಡಿ ದೊಣ್ಣೆಯಿಂದ ಹಲ್ಲೆ ಮಾಡಿ ನೋವುಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ: 21-07-2020 ರಂದು ಸೋಮವಾರಪೇಟೆ ತಾಲ್ಲೂಕು ಚಿಕ್ಕತ್ತೂರು ಗ್ರಾಮದ ನಿವಾಸಿ ಗಣೇಶ್‍ ಎಂಬುವವರು ಅವರ ಮನೆಯ ಬಳಿ ಸ್ನೇಹಿತರೊಂದಿಗೆ ಮಾತನಾಡಿಕೊಂಡಿರುವಾಗ ದಿಲೀಪ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

ಮಡಿಕೇರಿ ತಾಲ್ಲೂಕು ಗಾಳಿಬೀಡು ಗ್ರಾಮದ ನಿವಾಸಿ ಚಂಗಪ್ಪ ಎಂಬುವವರು ಅವರ ಮನೆಯಲ್ಲಿ ಗಾಡ್ರೇಜ್‍ ಬೀರುವಿನಲ್ಲಿ ಇಟ್ಟಿದ್ದ 24,000 ರೂ ಬೆಲೆ ಬಾಳುವ ಚಿನ್ನಾಭರಣಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದಿನಾಂಕ: 21-07-2020 ರಂದು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.