Crime News
ಆಕಸ್ಮಿಕವಾಗಿ ಮರದಿಂದ ಬಿದ್ದು ವ್ಯಕ್ತಿ ಸಾವು
ದಿನಾಂಕ: 22-07-2020 ರಂದು ಸೋಮವಾರಪೇಟೆ ತಾಲ್ಲೂಕು ತಣ್ಣೀರುಹಳ್ಳ ಗ್ರಾಮದ ನಿವಾಸಿ ಗಣೇಶ ಎಂಬುವವರು ಅಬ್ಬೂರುಕಟ್ಟೆ ಗ್ರಾಮದ ಶಾಂತಕುಮಾರ ಎಂಬುವವರ ತೋಟದಲ್ಲಿ ಮರವನ್ನು ಹತ್ತಿ ಕಪಾತು ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆಬಿದ್ದು ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದು ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.