Crime News

ಬೈಕ್‍ ಅಪಘಾತ, ಸವಾರ ಸಾವು

ದಿನಾಂಕ: 27-07-2020 ರಂದು ಸೋಮವಾರಪೇಟೆ ತಾಲ್ಲೂಕು ಮಾದಾಪುರ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ12-ಹೆಚ್‍-5638 ರ ಬೈಕನ್ನು ಅದರ ಸವಾರ  ಗೌತಮ್‍ ಎಂಬುವವರು ಅತಿವೇಗ ಮತ್ತು ಅಜಾರೂಕತೆಯಿಂದ ಚಾಲನೆ ಮಾಡಿ ರಸ್ತೆ ಬದಿಯಲ್ಲಿದ್ದ ವಿದ್ಯತ್‍ ಕಂಬಕ್ಕೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‍ ಸವಾರ ಗಂಭೀರ ಗಾಯಗೊಂಡು ಮೃತಪಟ್ಟಿದ್ದು ಹಾಗೂ ಗಾಯಗೊಂಡಿದ್ದ ಹಿಂಬದಿ ಸವಾರ ಹರ್ಷ ಎಂಬುವವರು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ: 27-07-2020 ರಂದು ವಿರಾಜಪೇಟೆ ತಾಲ್ಲೂಕು ಧನುಗಾಲ ಗ್ರಾಮದ ನಿವಾಸಿ ಆನಂದ ಎಂಬುವವರು ಮಾಯಮುಡಿ ಗ್ರಾಮಕ್ಕೆ ಹೋಗುತ್ತಿರುವಾಗ ದೀಪು ಎಂಬುವವರು ಕ್ಷುಲ್ಲಕ ಕಾರಣಕ್ಕೆ ದಾರಿ ತಡೆದು ಅವಾಚ್ಯ ಪದಗಳಿಂದ ಬೈದು ಇತರ ಮೂರು ಜನರೊಂದಿಗೆ ದೊಣ್ಣೆಯಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವಿಷಪೂರಿತ ಹಾವು ಕಚ್ಚಿ ಮಹಿಳೆ ಸಾವು

ದಿನಾಂಕ: 27-07-2020 ರಂದು ವಿರಾಜಪೇಟೆ ತಾಲ್ಲೂಕು ತೈಲಾ ಗ್ರಾಮದ ಗಣಪತಿ ಎಂಬುವವರ ಲೈನ್‍ ಮನೆಯಲ್ಲಿ ವಾಸವಿರುವ ಶ್ರೀಮತಿ ಜಯಲಲಿತಾ ಎಂಬುವವರು ಅವರ ಪತಿಯೊಂದಿಗೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಕೈ ಬೆರಳಿಗೆ ಏನೋ ಕಚ್ಚಿದಂತಾಗಿದ್ದು ಅದನ್ನು ಸರಿಯಾಗಿ ಗಮನಿಸದೆ ಮನೆಗೆ ಬಂದಿರುತ್ತಾರೆ. ನಂತರ ರಾತ್ರಿ ಜಯಲಲಿತ ರವರು ಮಾತನಾಡದೇ ಅಸ್ವಸ್ಥಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಪರೀ್ಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ತೋಟದಲ್ಲಿ ಕೆಲಸ ಮಾಡುವಾಗಿ ಯಾವುದೋ ವಿಷಪೂರಿತ ಹಾವು ಕೈಬೆರಳಿಗೆ ಕಚ್ಚಿ ಮೃತಪಟ್ಟಿರುವುದಾಗಿ ಮೃತರ ತಾಯಿ ನೀಡಿದ ದೂರಿನ ಮೇರೆ ಕುಟ್ಟ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.