Crime News

ಹಲ್ಲೆ ಪ್ರಕರಣ

ದಿನಾಂಕ: 27-07-2020 ರಂದು ವಿರಾಜಪೇಟೆ ತಾಲ್ಲೂಕು ತಿತಿಮತಿ ಮರೂರು ಗ್ರಾಮದ ನಿವಾಸಿ ಹರೀಶ್‍ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ರವಿಶಂಕರ್‍ ಮತ್ತು ಪುನೀತ್ ಎಂಬುವವರು ಹಳೆ ವೈಷಮ್ಯದಿಂದ ಅವಾಚ್ಯ ಪದಗಳಿಂದ ಬೈದು ಕತ್ತಿಯಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಸಾಗಾಟ ಪ್ರಕರಣ

ದಿನಾಂಕ: 28-07-2020 ರಂದು ವಿರಾಜಪೇಟೆ ತಾಲ್ಲೂಕು ಶ್ರೀಮಂಗಲ ಗ್ರಾಮದಲ್ಲಿ ಅಕ್ರಮವಾಗಿ ಆಟೊರಿಕ್ಷಾದಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಶ್ರೀಮಂಗಲ ಠಾಣೆ ಪಿಎಸ್‍ಐ ಆರ್‍. ಮಂಚಯ್ಯ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಮೇಲೆ ಹಲ್ಲೆ

ದಿನಾಂಕ: 28-07-2020 ರಂದು ವಿರಾಜಪೇಟೆ ತಾಲ್ಲೂಕು ಪೆರುಂಬಾಡಿ ಗ್ರಾಮದ ತೆರ್ಮೆ ಕಾಡು ಪೈಸಾರಿ ನಿವಾಸಿ ಪ್ರಕಾಶ್‍ ಎಂಬುವವರಿಗೆ ಪಕ್ಕದ ಮನೆಯ ನಿವಾಸಿ ಅಣ್ಣಪ್ಪ ಎಂಬುವವರು ಕ್ಷುಲ್ಲಕ ಕಾರಣಕ್ಕೆ ದೊಣ್ಣೆಯಿಂದ ತಲೆಗೆ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.