Crime News
ಬ್ಯಾಂಕ್ ಕಟ್ಟಡಕ್ಕೆ ಕನ್ನಹಾಕಿ ಕಳ್ಳತನಕ್ಕೆ ಯತ್ನ
ದಿನಾಂಕ: 28-07-2020 ರಂದು ರಾತ್ರಿ ಮಡಿಕೇರಿ ತಾಲ್ಲೂಕು ಮಕ್ಕಂದೂರು ಗ್ರಾಮದಲ್ಲಿರುವ ಕೆನರಾ ಬ್ಯಾಂಕ್ ಕಟ್ಟಡದ ಹಿಂಭಾಗದ ಗೋಡೆಯನ್ನು ಯಾರೋ ಕಳ್ಳರು ಬ್ಯಾಂಕ್ನೊಳಗೆ ನುಗ್ಗಿ ಕಳವು ಮಾಡಲು ಪ್ರಯತ್ನಿಸಿದ್ದು ಈ ಬಗ್ಗೆ ಬ್ಯಾಂಕ್ ಮೇನೇಜರ್ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಬೈಕ್ಗೆ ಕಾರು ಡಿಕ್ಕಿ, ಸವಾರರಿಗೆ ಗಾಯ.
ದಿನಾಂಕ: 29-07-2020 ರಂದು ವಿರಾಜಪೇಟೆ ತಾಲ್ಲೂಕು ತಿತಿಮತಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಕೆಎ-50-6061 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಬೈಕ್ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ಸವಾರರರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ಜುಬೇರ್ ಷರೀಪ್ ಎಂಬುವವರು ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ರಸ್ತೆ ಅಪಘಾತ ಪ್ರಕರಣ
ದಿನಾಂಕ: 29-07-2020 ರಂದು ವಿರಾಜಪೇಟೆ ತಾಲ್ಲೂಕು ಧನುಗಾಲ ಗ್ರಾಮದ ಬಳಿ ಕೋಣನಕಟ್ಟೆ ಮುಖ್ಯ ರಸ್ತೆಯಲ್ಲಿ ಕೆಎ-12-ಎನ್ 1264 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಗಣಪತಿ ಎಂಬುವವರು ಚಾಲನೆ ಮಾಡುತ್ತಿದ್ದ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಬೆನ್ನಿಗೆ ನೋವುಂಟಾಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.