Crime News

ಮನೆ ಕಳವು

ಶ್ರೀಮಂಗಲ ಪೊಲೀಸ್ ಠಾಣಾ ಸರಹದ್ದಿನ ಹುದಿಕೇರಿ ಗ್ರಾಮದ ನಿವಾಸಿ ಶ್ರೀಮತಿ ಬಲ್ಯಮಾಡ ಶಾಲಿನಿಯವರು ದಿನಾಂಕ 12-8-2020 ರಂದು ತಮ್ಮ ಮನೆಗೆ ಬೀಗ ಹಾಕಿ ತಮ್ಮ ತಾಯಿಯ ಮನೆಗೆ ಹೋಗಿದ್ದ ಸಂದರ್ಭದಲ್ಲಿ ಯಾರೋ ಕಳ್ಳರು ಮನೆಯ ಚಾವಣಿಯ ಹಂಚುಗಳನ್ನು ತೆಗೆದು ಮನೆಯೊಳಗೆ ಪ್ರವೇಶ ಮಾಡಿ 31,000 ರೂ ಬೆಲೆಬಾಳುವ ಪೀಚೆಕತ್ತಿ ಹಾಗು 15,000 ರೂ. ನಗದನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು, ಈ ಸಂಬಂಧ ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂಜು ಅಡ್ಡೆಮೇಲೆ ದಾಳಿ

ಕುಶಾಲನಗರ ಗ್ರಾಮಾಂತರ ಠಾಣಾ ಸರಹದ್ದಿನ ಕೂಡುಮಂಗಳೂರ ಗ್ರಾಮದ ಇಂಡೆಸ್ಟ್ರಿಯಲ್ ಏರಿಯಾದ ಸಾರ್ವಜನಿಕ ಸ್ಥಳದಲ್ಲಿ ಸುಮಾರು 6 ಜನರು ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದು ಅವರ ಮೇಲೆ ಪೊಲೀಸರು ದಾಳಿ ಮಾಡಿ ಜೂಜಾಟಕ್ಕೆ ಬಳಸಿದ ಹಣ ರೂ.11,050/- ಗಳನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಹಲ್ಲೆ

ವಿರಾಜಪೇಟೆ ತಾಲೋಕು ಬೈರಂಬಾಡ ಗ್ರಾಮದ ನಿವಾಸಿ ಎಂ.ಎಸ್. ಪೂವಯ್ಯ ಎಂಬವರ ಮೇಲೆ ಅದೇ ಗ್ರಾಮದ ನಿವಾಸಿಗಳಾದ ಎಂ.ಬಿ. ರಾಜ,ಎಂ. ಗೋಪಾಲ ಹಾಗು ಕೆ.ಸಿ. ಕಾರ್ಯಪ್ಪ ಎಂಬವರುಗಳು ಸೇರಿ ಗಣೇಶ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಜೀವ ಬೆದರಿಕೆ ಒಡ್ಡಿರುತ್ತಾರೆಂದು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬಸ್ ಡಿಕ್ಕಿಯಾಗ ಪಾದಚಾರಿ ಸಾವು.

ಮಡಿಕೇರಿ ಗ್ರಾಮಾಂತರ ಠಾಣಾ ಸರಹದ್ದಿನ ಮದೆನಾಡು ಗ್ರಾಮದ ದೇವರಕೊಲ್ಲಿ ಸಾರ್ವಜನಿಕ ರಸ್ತೆಯಲ್ಲಿ ದಿನಾಂಕ 17-8-2020 ರಂದು ಮದೆನಾಡು ಗ್ರಾಮದ ನಿವಾಸಿ ಶ್ರೀಮತಿ ಯಶೋಧ ಎಂಬವರ ಪತಿ ಪಿ.ಕೆ. ವಿಜಯ ಎಂಬವರು ರಸ್ತೆಯ ಬದಿಯಲ್ಲಿ ನಡೆದುಕೊಂಡು ಮನೆಯ ಕಡೆಗೆ ಬರುತ್ತಿದ್ದಾಗ ಕೆ.ಎಸ್.ಆರ್.ಟಿ.ಸಿ ಬಸ್ಸು ಅವರಿಗೆ ಡಿಕ್ಕಿಯಾಗಿ ಮೃತಪಟ್ಟಿದ್ದು ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.