Crime News

ಹಲ್ಲೆ ಪ್ರಕರಣ

ದಿನಾಂಕ: 26-08-2020 ರಂದು ಸೊಮವಾರಪೇಟೆ  ತಾಲ್ಲೂಕು ಕುಶಾಲನಗರ ದಂಡಿನಪೇಟೆ ನಿವಾಸಿ ಮಹಮ್ಮದ್ ರಫೀಕ್‍ ಎಂಬುವವರಿಗೆ ಅವರ ಜೊತೆ ಗುಜರಿ ವ್ಯಾಪಾರ ಮಾಡುತ್ತಿದ್ದ ಚೆಲುವ ೆಎಂಬುವವರು ಹಣದ ವಿಚಾರದಲ್ಲಿ ಜಗಳ ಮಾಡಿ ತಕ್ಕಡಿಯಿಂದ ಹಲ್ಲೆ ಮಾಡಿ ಮಾರಣಾಂತಿಕ ಗಾಯಗೊಂಡಿದ್ದು ಈ ಬಗ್ಗೆ ತಾಹೇಬ್‍ ಹುಸೇನ್‍ ಎಂಬುವವರು ನೀಡಿದ ಪುಕಾರಿನ ಮೇರೆ ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ: 28-08-2020 ರಂದು ಸೋಮವಾರಪೇಟೆ ತಾಲ್ಲೂಕು ಬಾಣಾವಾರ ಗ್ರಾಮದ ನಿವಾಸಿ ಜಗದೀಶ್‍ ಎಂಬುವವರಿಗೆ ಅವರ ಪಕ್ಕದ  ಮನೆಯ ನಿವಾಸಿ ಮೋಹನ್‍, ಪ್ರೇಮ, ಗಗನ್‍  ಎಂಬುವವರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.