Crime News

ಹಲ್ಲೆ ಪ್ರಕರಣ

ದಿನಾಂಕ: 05-09-2020 ರಂದು ಸೋಮವಾರಪೇಟೆ ತಾಲ್ಲೂಕು ಕೂತಿ ಗ್ರಾಮದ ನಿವಾಸಿ ಸಂದೀಪ್‍ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ಚಂದ್ರಶೇಖರ ಎಂಬುವವರು ದಾರಿ ತಡೆದು ತೋಟದ ದಾರಿ ವಿಚಾರದಲ್ಲಿ ಜಗಳ ಮಾಡಿ ಹಲ್ಲೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ: 05-09-2020 ರಂದು ಸೋಮವಾರಪೇಟೆ ತಾಲ್ಲೂಕು ಜಂಬೂರು ಬಾಣೆ ನಿವಾಸಿ ರೂವೇಜ್‍ ಶೇಖ್‍ ಎಂಬುವವರ ಮನೆಗೆ ಅದೇ ಗ್ರಾಮದ ನಿವಾಸಿಗಳಾದ ಭಾನು, ರಶೀದ್, ಪ್ರತಾನ್, ಚೇತನ್‍ ಎಂಬುವವರು  ಅಕ್ರಮ ಪ್ರವೇಶ ಮಾಡಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ: 06-09-2020 ರಂದು ಸೋಮವಾರಪೇಟೆ ತಾಲ್ಲೂಕು ಬೀಟಿ ಕಟ್ಟೆ ಗ್ರಾಮದ  ಸಾರ್ವಜನಿಕ ಬಸ್ ತಂಗುದಾಣದ ಬಳಿ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡಿ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಶನಿವಾರಸಂತೆ ಠಾಣೆ ಪಿಎಸ್‍ಐ ದೇವರಾಜು ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಹಾರಳ್ಳಿ ಗ್ರಾಮದ ನಿವಾಸಿ ಸಂದೀಪ್‍ ಎಂಬುವವರ ವಿರುದ್ದ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ರಸ್ತೆಅಪಘಾತ ಪ್ರಕರಣ

ದಿನಾಂಕ: 04-09-2020 ರಂದು ಸೋಮವಾರಪೇಟೆ ತಾಲ್ಲೂಕು ಕೂಡ್ಲೂರು ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-13-ಇಎಲ್-4663 ರ ದ್ವಿಚಕ್ರ ವಾಹನವನ್ನು ಅದರ ಸವಾರ ರಾಜು ಎಂಬುವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿ ಬೈಕ್‍ ರಸ್ತೆಗೆ ಬಿದ್ದುದರಿಂದ ಹಿಂಬದಿ ಸವಾರ ಅರುಣ್ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ದಿನಾಂಕ: 06-09-2020 ರಂದು ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.