Crime News

ಹಲ್ಲೆ ಪ್ರಕರಣ

ದಿನಾಂಕ: 06-09-2020 ರಂದು ಸೋಮವಾರಪೇಟೆ ತಾಲ್ಲೂಕು ಮಾದಾಪಟ್ಟಣ ಗ್ರಾಮದ ಗೋಲ್ಡ್ ಫಿಂಗರ್‍ ಬಾರ ಬಳಿ ಗೋಂದಿಬಸವನಹಳ್ಳಿ ಗ್ರಾಮದ ನಿವಾಸಿ ರಘು ಎಂಬುವವರು ಸ್ನೇಹಿತರೊಂದಿಗೆ ಮಾತನಾಡಿಕೊಂಡಿರುವಾಗ ಪ್ರವೀಣ, ಜಗದೀಶ, ಆನಂದ, ಮಂಜುನಾಥ ಮತ್ತು ಶಿವಮೂರ್ತಿ ಎಂಬುವವರು ಕ್ಷುಲ್ಲಕ ಕಾರಣಕ್ಕೆ ರಘು, ಸುನಿಲ್‍, ಕುಮಾರ, ಜಿ.ಬಿ ಜಗದೀಶ ರವರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ನೀಡಿದ  ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಗಾಂಜಾ ಸಾಗುವಳಿ ಪ್ರಕರಣ

ದಿನಾಂಕ: 07-09-2020 ರಂದು ಸೋಮವಾರಪೇಟೆ ತಾಲ್ಲೂಕು ನಿಲುವಾಗಿಲು ಗ್ರಾಮದ ನಿವಾಸಿಗಳಾದ ಭದ್ರಮ್ಮ ಮತ್ತು ಶಾಂತರಾಜು ಎಂಬುವವರು ಅವರ ಮನೆಯ ಹಿಂಭಾಗದ ಖಾಲಿ ಜಾಗದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಪ್ರಕರಣವನ್ನು ಶನಿವಾರಸಂತೆ ಠಾಣೆ ಪಿಎಸ್‍ಐ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ:  07-09-2020 ರಂದು ಸೋಮವಾರಪೇಟೆ ತಾಲ್ಲೂಕು ಯೆಡವಾರೆ ಗ್ರಾಮದ ನಿವಾಸಿ ವಿಶ್ವನಾಥ ಎಂಬುವವರು ಅವರ ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ ಠಾಣೆ ಪಿಎಸ್‍ಐ ಶಿವಶಂಕರ್‍ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಆಕಸ್ಮಿಕ ಸಾವು ಪ್ರಕರಣ

ದಿನಾಂಕ: 06-09-2020 ರಂದು ವಿರಾಜಪೇಟೆ ತಾಲ್ಲೂಕು ಕೆದಮುಳ್ಳೂರು ಗ್ರಾಮದ ಮಾತಂಡ ಪೂವಯ್ಯ ಎಂಬುವವರ ಲೈನ್‍ ಮನೆಯಲ್ಲಿ ವಾಸವಿದ್ದ ಮಂಜು ಎಂಬುವವರು ತೋಟದ ಕೆಲಸ ಮುಗಿಸಿದ ನಂತರ ಕೆರೆಯಲ್ಲಿ ಕೈಕಾಲು ತೊಳೆಯುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಈ ಬಗ್ಗೆ  ಮೃತರ ಸಹೋದರ ರವಿ ಎಂಬುವವರು ನೀಡಿದ ದೂರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.