Crime News

ಅಕ್ರಮ ಗಾಂಜಾ ಮಾರಾಟ ಪ್ರಕರಣ, ಆರೋಪಿಗಳ ಬಂಧನ.

ಅಕ್ರಮ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಐದು ಮಂದಿ ಆರೋಪಿಗಳನ್ನು ಬಂಧಿಸಿ, 3 ಕೆ.ಜಿ. 360 ಗ್ರಾಂ ತೂಕದ ಗಾಂಜಾ ಹಾಗೂ 5 ಸಾವಿರ ರೂ. ನಗದು ವಶಪಡಿಸಿಕೊಳ್ಳುವಲ್ಲಿ ವೀರಾಜಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ದಿನಾಂಕ 8-9-2020 ರಂದು ವಿರಾಜಪೇಟೆ ನಗರ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಿದ್ದಾಪುರ ಕಡೆಯಿಂದ ಕೆ.ಎ.36 ಎಂ,0733 ರ ಮಾರುತಿ ಕಾರಿನಲ್ಲಿ ಗಾಂಜಾವನ್ನು ವಿರಾಜಪೇಟೆ ನಗರಕ್ಕೆ ಸಾಗಾಟ ಮಾಡುತ್ತಿದ್ದುದನ್ನು ನಗರದ ದಂತ ವೈದ್ಯಕೀಯ ಕಾಲೇಜಿನ ಬಳಿ ವಿರಾಜಪೇಟೆ ಪೊಲೀಸ್ ಉಪಾಧೀಕ್ಷಕ ಸಿ.ಟಿ. ಜಯಕುಮಾರ್ ರವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮೈಸೂರಿನ ರಾಜೀವ್ ನಗರದ ಆಟೋ ಚಾಲಕ ಎಂ.ಬಿ.ಮುದಾಶೀರ್, ಪ್ರಾಯ 35 ಮತ್ತು ವೆಲ್ಡಿಂಗ್ ಕೆಲಸಗಾರ ಎಸ್.ಎಕ್ಸ್.ಮಹ್ಮದ್ ಫರೂಕ್, ಪ್ರಾಯ 34, ವೀರಾಜಪೇಟೆ ತಾಲೋಕು, ದೇವಣಗೇರಿ ಗ್ರಾಮದ ಪಿ.ಎಸ್. ರಫೀಕ್, ಪ್ರಾಯ 42, ವೀರಾಜಪೇಟೆ ನಗರದ ಮೊಗರಗಲ್ಲಿ ನಿವಾಸಿ ಆರ್.ಮನು, ಪ್ರಾಯ 24 ಹಾಗೂ ವೀರಾಜಪೇಟೆ ಅರಸುನಗರದ ಎ.ಎಸ್. ಮಹೇಶ್, ಪ್ರಾಯ 23 ವರ್ಷ ಎಂಬವರನ್ನು ಬಂಧಿಸಿ, ಬಂಧಿತರಿಂದ ಒಂದು ಲಕ್ಷ ಮೌಲ್ಯದ 3 ಕೆ.ಜಿ. 360 ಗ್ರಾಂ ತೂಕದ ಗಾಂಜಾವನ್ನು ಹಾಗು ನಗದು 5,000/- ರೂಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಕಾರ್ಯಾಚರಣೆಯನ್ನು ವಿರಾಜಪೇಟೆ ಪೊಲೀಸ್ ಉಪಾಧೀಕ್ಷಕರಾದ ಸಿ.ಟಿ. ಜಯಕುಮಾರ್ ನೇತೃತ್ವದಲ್ಲಿ ನಡೆದಿದ್ದು, ಕಾರ್ಯಾಚರಣೆಯಲ್ಲಿ ವಿರಾಜಪೇಟೆ ಸಿಪಿಐ ಕ್ಯಾತೇಗೌಡ, ನಗರ ಠಾಣಾಧಿಕಾರಿ ಬೋಜಪ್ಪ, ಸಿಬ್ಬಂದಿಗಳಾದ ಮುಸ್ತಫಾ, ಗಿರೀಶ್, ಸಂತೋಷ್, ರಜನ್, ಲೋಕೇಶ್, ಮುನೀರ್ ಹಾಗು ಗೀತಾ ರವರು ಭಾಗವಹಿಸಿದ್ದು, ಇವರ ಕಾರ್ತವೈಖರಿಯನ್ನು ಪ್ರಶಂಶಿಸಲಾಗಿದೆ.

ಜಿಲ್ಲೆಯಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿರುವ ವ್ಯಕ್ತಿಗಳ ಬಗ್ಗೆ ತೀವ್ರ ನಿಗಾ ಇಡುವಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದ್ದು, ಸಾರ್ವಜನಿಕರೂ ಈ ಬಗ್ಗೆ ಪೊಲೀಸರೊಂದಿಗೆ ಸಹಕರಿಸುವಂತೆ ಕೊರಲಾಗಿದೆ.

 

ರಸ್ತೆ ಅಪಘಾತ ಪ್ರಕರಣ

ದಿನಾಂಕ: 07-09-2020 ರಂದು ಸೋಮವಾರಪೇಟೆ ತಾಲ್ಲೂಕು ಹುಲುಗುಂದ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಕ್ಯೂ-5503 ರ ಬೈಕನ್ನು ಸವಾರ ಮಂಜುನಾಥ ಎಂಬುವವರು ತಿರುವು ರಸ್ತೆಯಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಬೈಕ್‍ ನಿಯಂತ್ರಣ ತಪ್ಪಿ ಸವಾರರಿಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಾರು ಕಳವು ಪ್ರಕರಣ

ದಿನಾಂಕ: 06-09-2020 ರಂದು ಸೋಮವಾರಪೇಟೆ ತಾಲ್ಲೂಕು ಕಣಿವೆ ಗ್ರಾಮದ ನಿವಾಸಿ ಇಸ್ಮಾಯಿಲ್‍ ಎಂಬುವವರು ಅವರ ಮನೆಯ ಮುಂದೆ ನಿಲ್ಲಿಸಿದ್ದ ಕೆಎ-03-ಜೆಡ್- 4562 ರ ಮಾರುತಿ 800 ಕಾರನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬೈಕ್‍ ಕಳವು ಪ್ರಕರಣ

ದಿನಾಂಕ: 07-09-2020 ರಂದು ಸೋಮವಾರಪೇಟೆ ತಾಲ್ಲೂಕು ಬಿದರೂರು ಗ್ರಾಮದ ನಿವಾಸಿ ರಮೇಶ್‍ ಎಂಬುವವರು ಅವರ ಮನೆಯ ಮುಂದೆ ನಿಲ್ಲಿಸಿದ್ದ ಕೆಎ-12-ಜೆ-51 ರ  ಟಿವಿಎಸ್‍ ಸ್ಟಾರ್‍ ಸಿಟಿ ಬೈಕನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

ದಿನಾಂಕ: 08-09-2020 ರಂದು ವಿರಾಜಪೇಟೆ ತಾಲ್ಲೂಕು ನಾಲ್ಕೇರಿ ಗ್ರಾಮದ ನಿವಾಸಿ ಅಲ್ಲುಮಾಡ ಕೀರ್ತಿ ಎಂಬುವವರಿಗೆ ಅವರ ಸಂಬಂದಿಕರಾದ ಪೆಮ್ಮಂಡ ಶರತ್‍ ಮತ್ತು ಸಂಗೀತ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಟ್ಟ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 07-09-2020 ರಂದು ಮಡಿಕೇರಿ ತಾಲ್ಲೂಕು ಕೊಯಿನಾಡು ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-12-ಎಂಎ-3965 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತುಅಜಾಗರೂಕತೆಯಿಂದ ಚಾಲನೆ ಮಾಡಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಎಲ್‍-6208 ರ ಬೈಕ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‍ ಸವಾರ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆಕೈಗೊಂಡಿದ್ದಾರೆ.

ರಸ್ತೆ ಅಪ‍ಘಾತ ಪ್ರಕರಣ

ದಿನಾಂಕ: 08-09-2020 ರಂದು ಮಡಿಕೇರಿ ತಾಲ್ಲೂಕು ಹಾಕತ್ತೂತು ಗ್ರಾಮದ ಬಳಿ ಮುಖ‍್ಯ ರಸ್ತೆಯಲ್ಲಿ ಕೆಎ-04-ಎಂಕ್ಯೂ-7884 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತುಅಜಾಗರೂಕತೆಯಿಂದ ಚಾಲನೆ ಮಾಡಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಎಲ್‍-5508 ರ ಬೈಕ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‍ ಸವಾರ ಮತ್ತು ಹಿಂಬದಿ ಸವಾರ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆಕೈಗೊಂಡಿದ್ದಾರೆ.