Crime News

ವ್ಯಕ್ತಿ ಆತ್ಮಹತ್ಯೆ

ದಿನಾಂಕ: 08-09-2020 ರಂದು ವಿರಾಜಪೇಟೆ ತಾಲ್ಲೂಕು ಬಿಟ್ಟಂಗಾಲ ಗ್ರಾಮದ ನಿವಾಸಿ ಕಿರಣ್‍ ಎಂಬುವವರು ವೈಯಕ್ತಿಕ ವಿಚಾರದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಯಾವುದೋ ವಿಷ ಸೇವಿಸಿ ಅಸ್ವಸ್ಥಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕಿರಣ್‍ ರವರು ಮೃತಪಟ್ಟಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 09-09-2020 ರಂದು ವಿರಾಜಪೇಟೆ ತಾಲ್ಲೂಕು ಹುಂಡಿ ಗ್ರಾಮದ ಬಳಿ ಮುಖ‍್ಯ ರಸ್ತೆಯಲ್ಲಿ ಕೆಎಲ್-52-ಇ-5525 ರ ಗೂಡ್ಸ್ ವಾಹನವನ್ನು ಅದರ ಚಾಲಕ ಅಬ್ದುಲ್‍ ಶಕೀರ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಬಿ-6510 ರ ಆಟೋರಿಕ್ಷಾಕ್ಕೆ ಡಿಕ್ಕಿಪಡಿಸಿದ ಪರಿಣಾಮ ಆಟೋದಲ್ಲಿದ್ದ ಚಾಲಕ ಮತ್ತು ಪ್ರಯಾಣಿಕರು ಗಾಯಗೊಂಡಿದ್ದು ಈ ಬಗ್ಗೆ ಆಟೋ ಚಾಲಕ ಪವನ್‍ ಕುಮಾರ್‍ ಎಂಬುವವರು ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.