Crime News

ರಸ್ತೆ ಅಪಘಾತ  ಪ್ರಕರಣ

ದಿನಾಂಕ: 13-09-2020 ರಂದು ಸೋಮವಾರಪೇಟೆ ತಾಲ್ಲೂಕು ಯಡವನಾಡು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಎಂಎ-4195 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರು ಮಗುಚಿ ಬಿದ್ದುದರಿಂದ ಚಾಲಕ ರಂಜಿತ್‍ ಎಂಬುವವರು ಗಾಯಗೊಂಡಿರುತ್ತಾರೆ. ಡಿಕ್ಕಿಪಡಿಸಿದ ನಂತರ ಚಾಲಕ ಕಾರನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 13-09-2020 ರಂದು ವಿರಾಜಪೇಟೆ ತಾಲ್ಲೂಕು ಪಾಲಿಬೆಟ್ಟ ಗ್ರಾಮದ ಗೋಣಿಕೊಪ್ಪ ರಸ್ತೆಯ ಬದಿಯಲ್ಲಿ ಮಡಿಕೇರಿ ನಿವಾಸಿ ಬಾಬು ಎಂಬುವವರು ನಡೆದುಕೊಂಡು ಹೋಗುತ್ತಿರುವಾಗ ಯಾವುದೋ ಒಂದು ವಾಹನವನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಡಿಕ್ಕಿಪಡಿಸಿದ ಪರಿಣಾಮ ಬಾಬು ರವರು ಗಾಯಗೊಂಡಿರುತ್ತಾರೆ. ಡಿಕ್ಕಿಪಡಿಸಿದ ನಂತರ ಚಾಲಕ ವಾಹನವನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.