Crime News
ಆಕಸ್ಮಿಕ ಸಾವು ಪ್ರಕರಣ
ದಿನಾಂಕ: 20-09-2020 ರಂದು ಬೆಳಿಗ್ಗೆ ಸೋಮವಾರಪೇಟೆ ತಾಲ್ಲೂಕು ಅತ್ತೂರು ನಲ್ಲೂರು ಗ್ರಾಮದ ನಿವಾಸಿ ಜಾನಕಿ ಎಂಬುವವರು ಅವರ ಮನೆಯ ಮುಂದಿನ ತೋಡಿನ ಪಕ್ಕದಲ್ಲಿ ಗಿಡಗಳಿಂದ ಹೂ ತೆಗೆಯುತ್ತಿರುವಾಗ ಆಕಸ್ಮಿಕವಾಗಿ ತೋಡಿನ ನೀರಿನಲ್ಲಿ ಬಿದ್ದು ಮೃತಪಟ್ಟಿದ್ದು ಈ ಬಗ್ಗೆ ಮೃತರ ಮಗ ನೀಡಿದ ದೂರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಮೇಲೆ ಹಲ್ಲೆ
ದಿನಾಂಕ: 20-09-2020 ರಂದು ಸೋಮವಾರಪೇಟೆ ತಾಲ್ಲೂಕು ದೊಡ್ಡಕುಂದ ಗ್ರಾಮದ ನಿವಾಸಿ ವೇದಕುಮಾರ್ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ರಾಕೇಶ್ ಮತ್ತು ಗಗನ್ ಎಂಬುವವರು ಕ್ಷುಲ್ಲಕ ಕಾರಣಕ್ಕೆ ದಾರಿ ತಡೆದು ಕತ್ತಿಯಿಂದ ಹಲ್ಲೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಅಕ್ರಮ ಜೂಜಾಟ ಪ್ರಕರಣ
ದಿನಾಂಕ: 20-09-2020 ರಂದು ವಿರಾಜಪೇಟೆ ತಾಲ್ಲೂಕು ಬಿಟ್ಟಂಗಾಲ ಗ್ರಾಮದ ಬಾಳುಗೊಡು ಜಂಕ್ಷನ್ ಬಳಿ ಸಾರ್ವಜನಿಕ ಬಸ್ ತಂಗುದಾಣದ ಹಿಂಭಾಗ ಅಕ್ರಮವಾಗಿ ಇಸ್ಪೀಟ್ ಜೂಜಾಟವಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್ಐ ವೀಣಾ ನಾಯಕ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.